ಸಚಿವ ಡಿ.ಕೆ ಶಿವಕುಮಾರ್ ಗೆ ಮಾತೆ ಮಹಾದೇವಿ ತಿರುಗೇಟು

Public TV
2 Min Read
DKSHI 1

ಬಾಗಲಕೋಟೆ: ಧರ್ಮವನ್ನು ಒಡೆಯೋಕೆ ಮುಂದಾಗಿದ್ದು ತಪ್ಪು. ನಮ್ಮನ್ನು ಕ್ಷಮಿಸಿ ಬಿಡಿ ಎಂಬ ಸಚಿವರ ಹೇಳಿಕೆ ವಿಚಾರ ಸಂಬಂಧ ಡಿಕೆ ಶಿವಕುಮಾರ್ ಅವರು ಲಿಂಗಾಯತ ಸಮಾಜದವರ ಕ್ಷಮೆ ಕೇಳಬೇಕು ಅಂತ ಕೂಡಲಸಂಗಮ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಒತ್ತಾಯಿಸಿದ್ದಾರೆ.

ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ. ಲಿಂಗಾಯತ ಧರ್ಮವನ್ನು ಒಡೆದಿದ್ದಾರೆ. ಸಮಾಜವನ್ನು ಒಡೆದಿದ್ದಾರೆ ಅನ್ನೋದು ತಪ್ಪು. 12 ನೇ ಶತಮಾನದಲ್ಲಿ ಬಸವಣ್ಣನವರು ಸಂಪ್ರದಾಯಬದ್ಧವಾದ ಕಂದಾಚಾರಗಳನ್ನು ಬಿಟ್ಟು ಅವರು ಲಿಂಗಾಯತ ಧರ್ಮವನ್ನು ಕಟ್ಟಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರು ಮಾನ್ಯತೆ ಕೊಟ್ಟಿದ್ದಾರೆ. ಅದಕ್ಕೆ ನಾವು ಅಭಿನಂದಿಸಬೇಕು. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಯಿತು ಎಂದು ಡಿಕೆಶಿ ಹೇಳಿದ್ದು ತಪ್ಪು, ಇದು ಶುದ್ಧ ಸುಳ್ಳು ಅಂತ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಾವು ತಪ್ಪು ಮಾಡಿದ್ದೇವೆ, ನನ್ನ ಹೇಳಿಕೆಗೆ ಈಗಲೂ ಬದ್ಧ: ಡಿಕೆ ಶಿವಕುಮಾರ್

vlcsnap 2018 10 20 08h51m34s73

ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಬೇರೆ ಕಾರಣಗಳಿವೆ. ಆದರೆ ಅದಕ್ಕೆ ಲಿಂಗಾಯತ ಧರ್ಮದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಲಿಂಗಾಯತ ಧರ್ಮ ಪ್ರತ್ಯೇಕ ಮಾನ್ಯತೆ ವಿಚಾರಕ್ಕಾಗಿಯೇ ಈ ಬಾರಿ ಕಾಂಗ್ರೆಸ್‍ಗೆ ಹೆಚ್ಚು ಮತಗಳು ಬಿದ್ದಿವೆ. ಬೀದರ್‍ನಲ್ಲಿ ಐದು ಶಾಸಕರಲ್ಲಿ ನಾಲ್ವರು ಕಾಂಗ್ರೆಸ್‍ನಿಂದಲೇ ಆಯ್ಕೆಯಾಗಿದ್ದಾರೆ. ಡಿಕೆ ಶಿವಕುಮಾರ್ ಈ ಬಗ್ಗೆ ಆತ್ಮನಿರೀಕ್ಷಣೆ ಮಾಡಿಕೊಳ್ಳಬೇಕು ಅಂದ್ರು.

ಡಿಕೆ ಶಿವಕುಮಾರ್ ಅವರು ಬಹಳ ವಿಚಿತ್ರವಾದ ಮಾತುಗಳನ್ನಾಡಿದ್ದಾರೆ. ಇದು ಸರಿಯಲ್ಲ ಖಂಡನಾರ್ಹ. ರಾಜಕೀಯ ಏಳು ಬೀಳುಗಳೇನೆ ಇರಲಿ. ಸಿದ್ದರಾಮಯ್ಯ ಮಾಡಿದ ಕಾರ್ಯ ಉತ್ತಮ ನಿರ್ಣಯವಾಗಿದೆ. ಡಿಕೆಶಿ ಅವರ ಹೇಳಿಕೆ ಬಾಲಿಷತನ. ಇದರ ಹಿಂದೆ ರಾಜಕೀಯ ಉದ್ದೇಶವಿದೆ. ಲೋಕಸಭೆ ಚುನಾವಣೆ, ಉಪಚುನಾವಣೆಯಲ್ಲಿ ಮತದಾರರ ಸೆಳೆಯುವ ಉದ್ದೇಶವಿದೆ. ಸಿದ್ದರಾಮಯ್ಯ ತಪ್ಪು ಮಾಡಿದರು ಎಂದು ಬಿಂಬಿಸುವ ಕುತಂತ್ರ ಇದರಲ್ಲಿದೆ ಅಂತ ಕಿಡಿಕಾರಿದ್ರು. ಇದನ್ನೂ ಓದಿ: ಶಿವಕುಮಾರ್ Vs ಎಂಬಿ ಪಾಟೀಲ್ – ಕಾಂಗ್ರೆಸ್‍ನಲ್ಲಿ ಮತ್ತೆ ಧರ್ಮ ಯುದ್ಧ ಶುರು

vlcsnap 2018 10 20 08h51m53s21

ಸಿದ್ದರಾಮಯ್ಯ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಶಿಫಾರಸ್ಸು ಮಾಡಿದ್ದು ಐತಿಹಾಸಿಕ ನಿರ್ಣಯವಾಗಿತ್ತು. ಮೊದಲು ಸಚಿವ ಸಂಪುಟದಲ್ಲಿ ಡಿಕೆ ಶಿವಕುಮಾರ ಇದ್ದು ಇದನ್ನು ಒಪ್ಪಿಕೊಂಡಿದ್ದಾರೆ. ಆದರೆ ಈಗ ವಿಭಿನ್ನ ಹೇಳಿಕೆ ನೀಡಿದ್ದಾರೆ. ಇದಕ್ಕಾಗಿ ಡಿಕೆ ಶಿವಕುಮಾರ ಲಿಂಗಾಯತ ಸಮಾಜದ ಕ್ಷಮೆ ಕೇಳಬೇಕು ಅಂತ ಇದೇ ವೇಳೆ ಮಹಾದೇವಿ ಒತ್ತಾಯಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *