ಸತೀಶ್ ನೀನಾಸಂ ಹುಟ್ಟು ಹಬ್ಬಕ್ಕೆ ‘ಮ್ಯಾಟ್ನಿ’ ಪೋಸ್ಟರ್

Public TV
2 Min Read
Satish Ninasam

ಸ್ಯಾಂಡಲ್ ವುಡ್ ಹೆಸರಾಂತ ನಟ ಸತೀಶ್ ನೀನಾಸಂ ಇಂದು ಹುಟ್ಟು ಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿಯ ಹುಟ್ಟು ಹಬ್ಬಕ್ಕಾಗಿ ಅವರ ‘ಮ್ಯಾಟ್ನಿ’ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಪೋಸ್ಟರ್ ರಿಲೀಸ್ ಮಾಡುವ ಮೂಲಕ ನೆಚ್ಚಿನ ನಟನ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದೆ. ದಸರಾ, ಅಶೋಕ ಬ್ಲೇಡ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸುತ್ತಿರುವ ಸತೀಶ್, ಇದೀಗ ಮ್ಯಾಟ್ನಿ ಸಿನಿಮಾದ ಬಹುತೇಕ ಕೆಲಸಗಳನ್ನು ಮುಗಿಸಿದ್ದಾರೆ.

ninasam satish 6

ಮೊನ್ನೆಯಷ್ಟೇ ಸತೀಶ್ ನೀನಾಸಂ (Satish Ninasam) ನಿರೀಕ್ಷಿತ ‘ಮ್ಯಾಟ್ನಿ’ (Matney) ಸಿನಿಮಾದ ಡಬ್ಬಿಂಗ್ (Dubbing) ಮುಗಿಸಿದ್ದಾರೆ. ಈಗಾಗಲೇ ತಮ್ಮ ಭಾಗದ ಮಾತಿನ ಮರುಲೇಪನವನ್ನು ಮಾಡಿರುವುದಾಗಿ ಸತೀಶ್ ಹೇಳಿದ್ದಾರೆ. ಮ್ಯಾಟ್ನಿಗೆ ಡಬ್ಬಿಂಗ್ ಮಾಡುವ ಮೂಲಕ ಚಿತ್ರತಂಡಕ್ಕೆ ಸಿನಿಮಾ ಬಿಡುಗಡೆ ತಯಾರಿಗೆ ಅನುವು ಮಾಡಿಕೊಟ್ಟಿದ್ದಾರೆ.

Satish Ninasam

ಅಯೋಗ್ಯ ಸಿನಿಮಾದ ಹಿಟ್ ಕಾಂಬಿನೇಶನ್ ಸತೀಶ್ ನೀನಾಸಂ ಹಾಗೂ ರಚಿತಾ ರಾಮ್ (Rachita Ram) ಮತ್ತೊಮ್ಮೆ ತೆರೆ ಮೇಲೆ ಮೋಡಿ ಮಾಡಲು ಒಂದಾಗಿರುವ ಚಿತ್ರ ‘ಮ್ಯಾಟ್ನಿ’. ಸ್ಯಾಂಡಲ್‍ವುಡ್ ನಲ್ಲಿ ಹೊಸ ಅಲೆ ಸೃಷ್ಟಿಸಲು ಸಜ್ಜಾಗಿರುವ ಮನೋಹರ್ ಕಾಂಪಲಿ (Manohar Kampali)  ಚೊಚ್ಚಲ ನಿರ್ದೇಶನದ ಚಿತ್ರವಿದು. ಪ್ರೇಮಿಗಳ ದಿನಕ್ಕೆ ಟೀಸರ್ ಉಡುಗೊರೆಯಾಗಿ ನೀಡಿತ್ತು. ಟೀಸರ್ ಬಗ್ಗೆ ಭಾರೀ ಮೆಚ್ಚುಗೆಯ ಮಾತುಗಳು ಕೇಳಿ ಬಂದಿದ್ದವು. ಇದನ್ನೂಓದಿ:ಹೆಣ್ಣು ಮಗುವಿನ ತಂದೆಯಾದ ನಟ ರಾಮ್ ಚರಣ್

ninasam satish 5

‘ಮ್ಯಾಟ್ನಿ’ಯ ಟೀಸರ್ ಕಲರ್ ಫುಲ್ ಸೆಟ್, ಮನ ಸೆಳೆಯೋ ಬ್ಯಾಗ್ರೌಂಡ್ ಮ್ಯೂಸಿಕ್, ರಚ್ಚು ಲುಕ್ ಎಲ್ಲವೂ ಕಣ್ಣಿಗೆ ಹಬ್ಬ ನೀಡಿದ್ದರೆ, ಸತೀಶ್ ನೀನಾಸಂ ಪ್ರೇಮ ನಿವೇದನೆ, ಪ್ರೀತಿಯ ಸಾಲುಗಳು ಕಣ್ಮನ ಸೆಳೆದಿದ್ದವು.  ಮನೋಹರ್ ಕಾಂಪಲಿ ಇಬ್ಬರು ಸ್ಟಾರ್ ಜೋಡಿಗೆ ಸರಿ ಹೊಂದುವಂತಹ ಒಂದೊಳ್ಳೆ ಕಥೆ ಹೆಣೆದಿದ್ದು ನಿರ್ದೇಶಕನಾಗಿ ತಮ್ಮನ್ನು ಸಹ ಪ್ರೂವ್ ಮಾಡಿಕೊಳ್ಳಲು ಸಕಲ ತಯಾರಿ ಮಾಡಿಕೊಂಡಿದ್ದಾರೆ.

ninasam satish 2

ರೋಮ್ಯಾಂಟಿಕ್ ಲವ್ ಸ್ಟೋರಿ ಸಬ್ಜೆಕ್ಟ್ ಇರುವ ಮ್ಯಾಟ್ನಿ ಚಿತ್ರದಲ್ಲಿ ಸತೀಶ್ ನೀನಾಸಂ ಶ್ರೀಮಂತ ಮನೆತನದ ಹುಡುಗನ ಪಾತ್ರಕ್ಕೆ ಬಣ್ಣಹಚ್ಚಿದ್ದು, ಲವರ್ ಬಾಯ್ ಅವತಾರವೆತ್ತಿದ್ದಾರೆ. ಈಗಾಗಲೇ ಅಯೋಗ್ಯ ಸಿನಿಮಾದಲ್ಲಿ ಸತೀಶ್ ಹಾಗೂ ರಚ್ಚು ಜೋಡಿ ಹಿಟ್ ನೀಡಿದ್ದು, `ಮ್ಯಾಟ್ನಿ’ ಸಿನಿಮಾದಲ್ಲೂ ಈ ಜೋಡಿ ಮೋಡಿ ಮಾಡಲಿದೆ ಎನ್ನುವ ನಿರೀಕ್ಷೆಯೂ ಹೆಚ್ಚಿದೆ.

 

ಸದ್ಯ ಇದೊಂದು ಲವ್ ಸ್ಟೋರಿ ಎಂದಿರುವ ನಿರ್ದೇಶಕರು ಸಿನಿಮಾ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.  ಎಫ್ 3 ಪ್ರೊಡಕ್ಷನ್ಸ್ ಬ್ಯಾನರ್ ನಡಿ ಪಾರ್ವತಿ ಎಸ್ ಗೌಡ ಚಿತ್ರವನ್ನು ನಿರ್ಮಿಸಿದ್ದು, ಲೂಸಿಯ ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ, ಸುಧಾಕರ್ ಸಿನಿಮಾಟೋಗ್ರಫಿ. ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ.

Share This Article