– ಈ ಪ್ರಕರಣದಲ್ಲಿ ರಾಜಕೀಯ ನಾಟಕ ನೋಡಲು ಬಯಸುವುದಿಲ್ಲ
ನವದೆಹಲಿ: ತಿರುಪತಿ ಲಡ್ಡು ವಿವಾದವನ್ನು (Tirupati Laddoo Row) ಸ್ವತಂತ್ರವಾದ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವುದಾಗಿ ಸುಪ್ರೀಂ ಕೋರ್ಟ್ (Supreme Court) ಹೇಳಿದೆ.
Advertisement
ತಿರುಪತಿ ಲಡ್ಡು ವಿವಾದ ಕೋಟ್ಯಂತರ ಜನರ ನಂಬಿಕೆ ವಿಚಾರವಾಗಿದೆ. ಈ ಪ್ರಕರಣದ ತನಿಖೆಗೆ ಸ್ವತಂತ್ರ ತನಿಖಾ ತಂಡ ಅಗತ್ಯವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದಕ್ಕಾಗಿ ಹೊಸದಾಗಿ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿದೆ. ಇದನ್ನೂ ಓದಿ: ಕೈ ನೀಡಿದ್ದ ಗ್ಯಾರಂಟಿ ಅನ್ನಭಾಗ್ಯದ ಹಣ ಸರಿಯಾಗಿ ತಲುಪುತ್ತಿಲ್ಲ : ಕೋಲಾರದಲ್ಲಿ ಸಾರ್ವಜನಿಕರ ಆಕ್ರೋಶ
Advertisement
ಪ್ರಕರಣದ ತನಿಖೆಗೆ ಸಿಬಿಐ, ರಾಜ್ಯ ಪೊಲೀಸ್ ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಅಧಿಕಾರಿಗಳನ್ನು ಒಳಗೊಂಡಿರುವ ಐದು ಸದಸ್ಯರುಗಳ ಹೊಸ ತನಿಖಾ ತಂಡವನ್ನು ರಚಿಸಲಾಗುತ್ತದೆ ಎಂದು ಕೋರ್ಟ್ ಹೇಳಿದೆ.
Advertisement
Advertisement
ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆಯಾಗಿದೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿತು. ಈ ವೇಳೆ ತಿರುಪತಿ ವಿಚಾರದಲ್ಲಿ ರಾಜಕೀಯ ನಾಟಕವನ್ನು ನೋಡಲು ನಾವು ಬಯಸುವುದಿಲ್ಲ. ಏಕೆಂದರೆ ಇದು ಪ್ರಪಂಚದಾದ್ಯಂತದ ಕೋಟ್ಯಂತರ ಭಕ್ತರ ನಂಬಿಕೆಯ ವಿಷಯವಾಗಿದೆ ಎಂದು ಹೇಳಿದೆ.
ಆಂಧ್ರಪ್ರದೇಶದ ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಆರೋಪಿಸಿದ್ದರು. ಈ ಆರೋಪ ಕೇಳಿ ಬಂದ ಬೆನ್ನಲ್ಲೇ ದೇಶದೆಲ್ಲೆಡೆ ಭಾರೀ ಸಂಚಲಕ್ಕೆ ಕಾರಣವಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಲಾಗಿತ್ತು. ಇದನ್ನೂ ಓದಿ: ಮಾತನಾಡಲು ವಿಷಯವಿಲ್ಲದೆ ಕುಮಾರಸ್ವಾಮಿಗೆ ಪೂರ್ತಿ ಹುಚ್ಚು ಹಿಡಿದಿದೆ: ಬೋಸರಾಜು