ಕೋಲ್ಕತ್ತಾ: ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಪ್ರಜಾಪ್ರಭುತ್ವದ ಹಕ್ಕು. ಅದರೆ ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಅವರ ವಿರುದ್ಧ ಹಿಂಸಾಚಾರ ಬಳಸುವುದು ಹಾಗೂ ಬೆದರಿಕೆ ಒಡ್ಡುವುದು ಪ್ರಜಾಪ್ರಭುತ್ವ ಹಕ್ಕುಗಳ ಉಲ್ಲಂಘನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಠಾಕೂರ್ ನಗರದಲ್ಲಿ ನಡೆದ ಮಟುವಾ ಧರ್ಮ ಮಹಾಸಮ್ಮೇಳ ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ನಮ್ಮ ಪ್ರಜಾಸತ್ತಾತ್ಮಕ ಹಕ್ಕು. ಆದರೆ ರಾಜಕೀಯ ವಿರೋಧದಿಂದಾಗಿ ಯಾರು ಯಾರನ್ನೇ ಬೆದರಿಸಿದರೂ ಅದು ಇತರರ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಹಿಂಸೆ, ಅರಾಜಕತೆಯ ಮನಸ್ಥಿತಿ ಎಲ್ಲಿಯೇ ಇದ್ದರೂ ಅದನ್ನು ವಿರೋಧಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳುವಳಿಕೆ ನೀಡಿದ್ದಾರೆ. ಇದನ್ನೂ ಓದಿ: ಮಾನವೀಯತೆ ಇರುವುದು ನಿಜವೇ? – ಸಿಎಂ ಕೇಜ್ರಿವಾಲ್‌ಗೆ ಅಗ್ನಿಹೋತ್ರಿ ಪ್ರಶ್ನೆ
Advertisement
Advertisement
ಪ್ರಸ್ತುತ ಭಾಷೆ, ಪ್ರದೇಶದ ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಹೊತ್ತಿನಲ್ಲಿ ಆಧ್ಯಾತ್ಮಿಕ ಗುರು ಶ್ರೀ ಹರಿಚಂದ್ ಠಾಕೂರ್ ಅವರ ಬೋಧನೆ ತತ್ವಗಳು ಮಹತ್ವದ್ದಾಗಿವೆ ಎಂದಿದ್ದಾರೆ. ಇದನ್ನೂ ಓದಿ: ರಷ್ಯಾ- ಉಕ್ರೇನ್ ಯುದ್ಧದಲ್ಲಿ ಭಾರತದ ನಿಲುವು ಹಗ್ಗದ ಮೇಲೆ ನೃತ್ಯ ಮಾಡಿದಂತಾಗಿದೆ: ಶಶಿ ತರೂರ್
Advertisement
ಮಟುವಾ ಹಿಂದುಳಿದ ಹಿಂದೂ ಸಮುದಾಯವಾಗಿದ್ದು, 2019ರ ಲೋಕಸಭೆ ಚುನಾವಣೆಯ ಮೊದಲು ಬಿಜೆಪಿ ಕೇಂದ್ರ ನಾಯಕರು ಭರವಸೆ ನೀಡಿದಂತೆ ಪೌರತ್ವ ತಿದ್ದುಪಡಿ ಕಾಯ್ದೆ (CAA) ಅನುಷ್ಠಾನಕ್ಕೆ ಒತ್ತಾಯಿಸುತ್ತಿದ್ದಾರೆ. ಆದರೆ ಈ ಸಮುದಾಯದಿಂದಲೇ ಶಾಸಕರಾಗಿ ಆಯ್ಕೆಯಾದವರು ಅದರ ಅನುಷ್ಠಾನದಲ್ಲಿ ವಿಳಂಬ ಮಾಡಿರುವುದರಿಂದ ಪಕ್ಷದ ನಾಯಕತ್ವದ ಬಗ್ಗೆ ಕೆಲವರು ಅತೃಪ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.
Advertisement
ಪ್ರಧಾನಮಂತ್ರಿ ಕಾರ್ಯಾಲಯ ಈಚೆಗಷ್ಟೇ ಹೊರಡಿಸಿದ ಸುತ್ತೋಲೆಯಲ್ಲೂ, ಠಾಕೂರ್ ಅವರು ಸ್ವಾತಂತ್ರ‍್ಯ ಪೂರ್ವದಲ್ಲಿ ಅವಿಭಜಿತ ಬಂಗಾಳದಲ್ಲಿ ತುಳಿತಕ್ಕೊಳಗಾದ, ದೀನದಲಿತ ಮತ್ತು ವಂಚಿತ ವ್ಯಕ್ತಿಗಳ ಸುಧಾರಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟವರು. ಅವರು ಪ್ರಾರಂಭಿಸಿದ ಸಾಮಾಜಿಕ ಮತ್ತು ಧಾರ್ಮಿಕ ಚಳವಳಿಯು ಈಗ ಬಾಂಗ್ಲಾದೇಶದಲ್ಲಿರುವ ಒರಕಂಡಿಯಲ್ಲಿ 1860ರಲ್ಲಿ ಹುಟ್ಟಿಕೊಂಡಿತು. ಮಟುವ ಧರ್ಮದ ರಚನೆಗೆ ಕಾರಣವಾಯಿತು ಎಂದು ಹೇಳಿದೆ.