‘ಮ್ಯಾಕ್ಸ್’ (Max) ಚಿತ್ರದಲ್ಲಿ ಅಭಿನಯಿಸಿದ್ದ ನಟ ಶ್ರೀಧರ್ (Shridhara) ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಬಾಲಿವುಡ್ ಸ್ಟಾರ್ಸ್
‘ವಧು’ ಸೀರಿಯಲ್‌ನಲ್ಲಿ ನಟಿಸುತ್ತಿದ್ದ ಶ್ರೀಧರ್ ಅವರು ಏಕಾಏಕಿ ಅನಾರೋಗ್ಯಕ್ಕೀಡಾಗಿದ್ದಾರೆ. ಇನ್‌ಫೆಕ್ಷನ್‌ನಿಂದ ನಟ ತೀವ್ರ ಅಸ್ವಸ್ಥರಾಗಿದ್ದಾರೆ. ಹೀಗಾಗಿ ಕಳೆದ ಕೆಲವು ದಿನಗಳಿಂದ ಅವರು ಬೆಂಗಳೂರಿನ ಹೆಬ್ಬಾಳದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟನನ್ನು ಅವರ ತಾಯಿ ನೋಡಿಕೊಳ್ತಿದ್ದಾರೆ. ಪ್ರತಿ ದಿನ ಚಿಕಿತ್ಸೆಗೆ 10ರಿಂದ 15 ಸಾವಿರ ರೂ. ಖರ್ಚಾಗುತ್ತಿದೆ. ಹಾಗಾಗಿ ಹೆಚ್ಚಿನ ಹಣ ಸಹಾಯಕ್ಕಾಗಿ ನಟನ ಪರ ‘ಕಮಲಿ’ ಖ್ಯಾತಿಯ ಅಂಕಿತಾ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಶ್ರೀಧರ್ ಅವರ ಪ್ರಸ್ತುತ ಪರಿಸ್ಥಿತಿಯ ಫೋಟೋ, ಬ್ಯಾಂಕ್ ಮಾಹಿತಿ ಸಮೇತ ಪೋಸ್ಟ್ ಮಾಡಿದ್ದಾರೆ. ಅವರಿಗೆ ನಟಿ ಸ್ವಪ್ನಾ ದೀಕ್ಷಿತ್ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ನಾನೊಬ್ಬ ಮುಸ್ಲಿಂ ಆಗಿದ್ದಕ್ಕೆ ನಾಚಿಕೆ ಆಗ್ತಿದೆ: ಉಗ್ರರ ದಾಳಿಗೆ ಸಲೀಂ ಮರ್ಚೆಂಟ್ ಕಿಡಿ
View this post on Instagram
ನಮಸ್ಕಾರ, ನಾನು ಶ್ರೀಧರ ಇದ್ದಕ್ಕಿದ ಹಾಗೆ ಅನಾರೋಗ್ಯಕ್ಕೆ ತುತ್ತಾಗಿ ಬಹಳಷ್ಟು ಸಂಕಷ್ಟದಲ್ಲಿದ್ದೇನೆ. ಆಸ್ಪತ್ರೆಯ ಖರ್ಚನ್ನು ಭರಿಸಲಾಗದಷ್ಟು ತೊಂದರೆಯಾಗಿದೆ. ಹೆಬ್ಬಾಳದಲ್ಲಿರುವ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಒಂದು ದಿನಕ್ಕೆ ಆಸ್ಪತ್ರೆಯ ಖರ್ಚು, ಮಾತ್ರೆಯ ಖರ್ಚು 10ರಿಂದ 15 ಸಾವಿರ ರೂ. ಆಗುತ್ತಿದೆ. ಇದ್ದ ಉಳಿತಾಯದ ಹಣ, ಸಹಾಯದ ಹಣ ಎಲ್ಲವೂ ಮುಗಿದುಹೋಗಿದೆ. ದಯಮಾಡಿ ತಾವೆಲ್ಲರೂ ಶ್ರೀಧರನಿಗೆ ಕೈಲಾದ ಹಣದ ಸಹಾಯ ಮಾಡಬೇಕೆಂದು ಅಂಗಲಾಚಿ ಬೇಡಿಕೊಳ್ಳುತ್ತಿದ್ದೇನೆ. ನನ್ನನ್ನು ಬದುಕಿಸಲು ಪ್ರಯತ್ನಿಸಿ, ಕೈಲಾದಷ್ಟು ಹಣದ ಸಹಾಯ ಮಾಡಿ ಎಂದು ಶ್ರೀಧರ್ ಹೇಳಿರುವುದನ್ನು ವಿಡಿಯೋದಲ್ಲಿ ನಟಿ ತಿಳಿಸಿದ್ದಾರೆ.
ವಧು, ಪಾರು ಸೇರಿದಂತೆ ಹಲವು ಸೀರಿಯಲ್‌ನಲ್ಲಿ ಅವರು ನಟಿಸಿದ್ದಾರೆ. ಜೊತೆಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.