ರಾಯಚೂರು: ಭಗವಂತ ಅವರಿಗೆ ಒಳ್ಳೆಯದನ್ನು ಮಾಡಲಿ ಎಂದು ಕೈ ಮುಗಿಯುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಯತ್ನಾಳ್‌ಗೆ ಟಾಂಗ್ ಕೊಟ್ಟಿದ್ದಾರೆ.ಇದನ್ನೂ ಓದಿ: ಕೋಲ್ಕತ್ತಾ ರೇಪ್ ಕೇಸ್ | ಮಗನನ್ನು ಗಲ್ಲಿಗೇರಿಸಿದ್ರೂ ಬೇಸರ ಇಲ್ಲ: ಸಂಜಯ್ ತಾಯಿ
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಯತ್ನಾಳ್ (Basanagouda Patil Yatnal) ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಆಂತರಿಕ ಪ್ರಜಾಪ್ರಭುತ್ವ ಇರುವಂತಹ ರಾಜಕೀಯ ಪಕ್ಷ. ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ಜವಾಬ್ದಾರಿ ನಿರ್ವಹಿಸಿಕೊಂಡು ಬಂದಿದ್ದೇನೆ. ಪಕ್ಷದ ಹಿರಿಯರು ಆಶೀರ್ವಾದ ಮಾಡಿ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ಮತ್ತೊಮ್ಮೆ ಆಶೀರ್ವಾದ ಮಾಡಿ ಪಕ್ಷ ಮುನ್ನಡೆಸಲು ಅವಕಾಶ ಕೊಡುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಮತ್ತೊಮ್ಮೆ ಎಲ್ಲರನ್ನು ಒಗ್ಗೂಡಿಸಿಕೊಂಡು ಕೆಲಸ ಮಾಡುವ ಅವಕಾಶ ಸಿಗುತ್ತೆ ಎನ್ನುವ ವಿಶ್ವಾಸವಿದೆ ಎಂದು ಭವಿಷ್ಯ ನುಡಿದರು.
ಇನ್ನೂ ಯತ್ನಾಳ್ ಆರೋಪ ಮತ್ತು ರಾಜೀನಾಮೆಗೆ ಆಗ್ರಹಿಸಿರುವ ವಿಚಾರಕ್ಕೆ ಬೇಸರದಿಂದ ಪ್ರತಿಕ್ರಿಯಿಸಿದ ಅವರು, ಯತ್ನಾಳ್‌ಗೆ ಎಲ್ಲಾ ಒಳ್ಳೆಯದಾಗಲಿ, ಭಗವಂತ ಅವರಿಗೆ ಒಳ್ಳೆಯದು ಮಾಡಲಿ ಎಂದು ಕೈ ಮುಗಿದರು.ಇದನ್ನೂ ಓದಿ: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ – ಸ್ಥಳದಲ್ಲೇ ನರೇಗಾ ಎಂಜಿನಿಯರ್ ಸಾವು