ಭಾರತದಿಂದ ದಾಳಿ ಭೀತಿ – ಅಲ್ಲಾಹುನೇ ಈ ಯುದ್ಧ ನಿಲ್ಲಿಸಬೇಕು: ಪಾಕ್ ರಕ್ಷಣಾ ಸಚಿವ

Public TV
1 Min Read
Khawaja Asif

– ಭಾರತ & ಪಾಕ್ ನಡುವೆ ಸಂಘರ್ಷ ಸಾಧ್ಯತೆ ಹೆಚ್ಚಾಗ್ತಿದೆ ಎಂದ ಆಸೀಫ್

ಇಸ್ಲಾಮಾಬಾದ್: ಭಾರತ ಮತ್ತು ಪಾಕ್ (India-Pakistan) ನಡುವಿನ ಸಂಘರ್ಷದ ಸಾಧ್ಯತೆಗಳು ಹೆಚ್ಚುತ್ತಿವೆ. ಅಲ್ಲಾಹುನೇ ಈ ಯುದ್ಧ ನಿಲ್ಲಿಸಬೇಕು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸೀಫ್ (Khawaja Asif) ಹೇಳಿಕೆ ನೀಡಿದ್ದಾರೆ.

ನೆರೆಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆಯನ್ನು ಶಮನಗೊಳಿಸಲು ಇತರ ದೇಶಗಳು ಪ್ರಯತ್ನಗಳನ್ನು ಮಾಡಿದರೂ, ಕಾಲ ಕಳೆದಂತೆ ಭಾರತದೊಂದಿಗೆ ಸಂಘರ್ಷದ ಸಾಧ್ಯತೆಗಳು ಹೆಚ್ಚುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಹಿಂದಿನ ‘ನೀನು ಹಿಂದೂನಾ’ ಅಂತ ಒಬ್ಬ ನನಗೆ ಕೇಳಿದ್ದ – ಉಗ್ರನ ಬಗ್ಗೆ ಪ್ರವಾಸಿಗರೊಬ್ಬರ ಸ್ಫೋಟಕ ಹೇಳಿಕೆ

Pahalgam Terror Attack 2 1

ಇತ್ತೀಚಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಗಮನಹರಿಸಿದಾಗ, ಕಾಲ ಕಳೆದಂತೆ ಸಂಘರ್ಷದ ಸಾಧ್ಯತೆ ಹೆಚ್ಚುತ್ತಿದ್ದು, ಕಡಿಮೆಯಾಗುತ್ತಿಲ್ಲ. ಆದರೂ ಅನೇಕ ದೇಶಗಳು ಪರಿಸ್ಥಿತಿಯನ್ನು ತಪ್ಪಿಸಲು ಪ್ರಯತ್ನಿಸುತ್ತಿವೆ ಎಂದು ತಿಳಿಸಿದ್ದಾರೆ.

ಒಂದು ವೇಳೆ ಪಾಕಿಸ್ತಾನ ದಾಳಿ ಎದುರಿಸಿದರೆ ಸೂಕ್ತ ಪ್ರತಿಕ್ರಿಯೆ ನೀಡುವುದು ನಿಶ್ಚಿತ. ಭಾರತದಿಂದ ಉಲ್ಲಂಘನೆಯಾದರೆ, ನಾವು ಪ್ರತಿಕ್ರಿಯಿಸುತ್ತೇವೆ. ನಮ್ಮ ಪ್ರತಿಕ್ರಿಯೆಯ ಸ್ವರೂಪವು ಭಾರತದ ಕ್ರಮದಿಂದ ನಿರ್ಧರಿಸಲ್ಪಡುತ್ತದೆ. ನಮ್ಮ ಪ್ರತಿಕ್ರಿಯೆಯ ಬಗ್ಗೆ ಯಾವುದೇ ಸಂದೇಹ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ – LOCಯಲ್ಲಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ

ಸಂಘರ್ಷದ ಪರಿಸ್ಥಿತಿಯನ್ನು ತಪ್ಪಿಸಲು ದೇವರು ಸಹಾಯ ಮಾಡಲಿ. ಪಾಕಿಸ್ತಾನದ ಪ್ರತಿಕ್ರಿಯೆಯ ಬಗ್ಗೆ ನಾನು ಊಹಿಸಲು ಬಯಸುವುದಿಲ್ಲ. ಆದರೆ ಅದು ಭಾರತದ ಕ್ರಮಕ್ಕಿಂತ ದೊಡ್ಡದಾಗಿರುತ್ತದೆ ಎಂದು ತಿಳಿಸಿದ್ದಾರೆ.

Share This Article