ಮುಂಬೈ: ಗಾಯದ ಸಮಸ್ಯೆಯಿಂದಾಗಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧ ಟೂರ್ನಿಯಿಂದ ಹೊರಗುಳಿದಿದ್ದಾರೆ. ಮುಂದಿನ ಏಕದಿನ ಟೂರ್ನಿಗೆ ರೋಹಿತ್ ಶರ್ಮಾ ಬದಲಾಗಿ ಮಯಾಂಕ್ ಅಗರ್ವಾಲ್ ಆಡಲಿದ್ದಾರೆ. ಏಕದಿನ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಮೂರನೇ ಕ್ರಮಾಂಕದಲ್ಲಿ ಕೆ.ಎಲ್.ರಾಹುಲ್ ಮತ್ತು ಪೃಥ್ವಿ ಶಾಗೆ ಜೊತೆಯಾಗಿ ಆಡಲಿದ್ದಾರೆ. ಇದರ ಜೊತೆಗೆ ಬಿಸಿಸಿಐ ಟೆಸ್ಟ್ ಸರಣಿಗೆ ತಂಡದ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ.
ಭಾನುವಾರ ನಡೆದ ಅಂತಿಮ ಟಿ20 ಪಂದ್ಯದಲ್ಲಿ 41 ಎಸೆತಗಳಲ್ಲಿ 60 ರನ್ ಸಿಡಿಸಿದ್ದ ರೋಹಿತ್, ಪಂದ್ಯದಲ್ಲಿ ಸಿಕ್ಸರ್ ಸಿಡಿಸಿದ ಬಳಿಕ ಗಾಯದ ಸಮಸ್ಯೆಗೆ ಒಳಗಾದರು. ಹೀಗಾಗಿ ನ್ಯೂಜಿಲೆಂಡ್ ಟೂರ್ನಿಗೆ ಅಲಭ್ಯರಾಗಿದ್ದಾರೆ. ರೋಹಿತ್ ಗಾಯದ ಸಮಸ್ಯೆ ಕುರಿತು ಮಾಹಿತಿ ನೀಡಿರುವ ಬಿಸಿಸಿಐ ವಕ್ತಾರರೊಬ್ಬರು, ರೋಹಿತ್ ಪ್ರವಾಸದಿಂದ ಹೊರಗಿದ್ದಾರೆ. ಅವರಿಗೆ ಆಗಿರುವ ಸಮಸ್ಯೆಯ ಪ್ರಭಾವ ಬಗ್ಗೆ ಮಾಹಿತಿ ಪಡೆಯಬೇಕಿದೆ. ಅವರು ಪ್ರವಾಸದ ಸರಣಿಯಲ್ಲಿ ಆಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
NEWS : Rohit Sharma has been ruled out of the upcoming ODI and the Test series against New Zealand.
Mayank Agarwal has been named as his replacement in the ODI squad. #NZvIND #TeamIndia pic.twitter.com/AUMeCSNfWQ
— BCCI (@BCCI) February 4, 2020
Advertisement
ಟೆಸ್ಟ್ ಟೀಂ: ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ(ಉಪ ನಾಯಕ), ಹನುಮ ವಿಹಾರಿ, ವೃದ್ಧಿಮಾನ್ ಶಾ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಜಸ್ಪ್ರಿತ್ ಬುಮ್ರಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ಇಶಾಂತ್ ಶರ್ಮಾ
Advertisement
India’s Test squad: Virat (Capt), Mayank, Prithvi Shaw, Shubman, Pujara, Ajinkya Rahane (vc), Hanuma Vihari, Wriddhiman Saha (wk), Rishabh Pant (wk), R. Ashwin, R. Jadeja, Jasprit Bumrah, Umesh Yadav, Mohd. Shami, Navdeep Saini, Ishant Sharma (subject to fitness clearance).
— BCCI (@BCCI) February 4, 2020