ಮುಂಬೈ: ದೇಶಿಯ ಕ್ರಿಕೆಟ್‍ನಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದರು ಬಿಸಿಸಿಐ ಆಯ್ಕೆ ಸಮಿತಿ ನಿರ್ಲಕ್ಷ್ಯದಿಂದ ಟೀಂ ಇಂಡಿಯಾದಲ್ಲಿ ಅವಕಾಶ ಪಡೆಯಲು ವಿಫಲವಾಗಿದ್ದ ಕನ್ನಡಿಗ ಮಾಯಾಂಕ್ ಅಗರ್ವಾಲ್ ತಂಡದಲ್ಲಿ ಸ್ಥಾನ ಪಡೆಯವುದು ಬಹುತೇಕ ಖಚಿತವಾಗಿದೆ.
ಮಾಯಾಂಕ್‍ರ ಪ್ರದರ್ಶನವನ್ನು ನಿರಂತವಾಗಿ ಗಮನಿಸುತ್ತಿದ್ದು, ದೇಶಿಯ ಕ್ರಿಕೆಟ್ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಬ್ಯಾಟಿಂಗ್ ಸಾಮರ್ಥ್ಯವನ್ನು ಕಾಯ್ದುಕೊಂಡಿದ್ದಾರೆ. ಆಸೀಸ್ ಎ ತಂಡದ ವಿರುದ್ಧ ನಡೆದ ಪಂದ್ಯದಲ್ಲೂ ಅರ್ಧ ಶತಕ ಸಿಡಿಸಿದ್ದಾರೆ. ಇದರ ಹೊರತಾಗಿಯೂ ಅಗರ್ವಾಲ್ ಟೀಂ ಇಂಡಿಯಾ ಕ್ಯಾಪ್ ಧರಿಸದಿರುವುದು ಕ್ರಿಕೆಟ್ ವಿಶ್ಲೇಷಕರಲ್ಲಿ ಹಾಗೂ ಅಭಿಮಾನಿಗಳಲ್ಲಿ ನಿರಾಸೆ ತಂದಿದೆ. ಶೀಘ್ರವೇ ತಂಡಕ್ಕೆ ಮಾಯಾಂಕ್ ಸೇರ್ಪಡೆಯಾಗಲಿದ್ದಾರೆ ಎಂದು ಪ್ರಸಾದ್ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
Advertisement
Advertisement
ಈಗಾಗಲೇ ಟೀಂ ಇಂಡಿಯಾ ಮುಖ್ಯ ಕೋಚ್ ಹಾಗೂ ಕರ್ನಾಟಕ ತಂಡದ ಕೋಚ್ ಗಳಿಗೆ ಅಗರ್ವಾಲ್ ಬ್ಯಾಟಿಂಗ್ ಬಗ್ಗೆ ಹೆಚ್ಚಿನ ಗಮನಹರಿಸಲು ಸೂಚನೆ ನೀಡಲಾಗಿದೆ. ಅಲ್ಲದೇ ಹೆಚ್ಚಿನ ಅವಕಾಶಗಳನ್ನು ನೀಡಲು ತಿಳಿದ್ದೇವೆ ಎಂದು ಪ್ರಸಾದ್ ಹೇಳಿದ್ದಾರೆ.
Advertisement
ರಣಜಿ ಟ್ರೋಫಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಮಾಯಾಂಕ್ 105.46 ಸರಾಸರಿಯಲ್ಲಿ 1160 ರನ್ ಸಿಡಿಸಿದ್ದಾರೆ. ಇದರಲ್ಲಿ ಐದು ಶತಕಗಳು ಸೇರಿದೆ. ಇನ್ನು ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸಿದ್ದ ಮಾಯಾಂಕ್ 3 ಶತಕ ಸಿಡಿಸಿದ್ದರು. 2018 ಐಪಿಎಲ್ ಟೂರ್ನಿಯಲ್ಲಿ ನಿರಾಸೆ ಮೂಡಿಸಿದ್ದರೂ ಇಂಡಿಯಾ ಎ ತಂಡ ಇಂಗ್ಲೆಂಡ್ ವಿರುದ್ಧ ಆಡಿದ್ದ ಟೂರ್ನಿಯಲ್ಲಿ ಮತ್ತೆ ಮಿಂಚಿದ್ದರು. ಅಲ್ಲದೇ ದಕ್ಷಿಣ ಆಫ್ರಿಕಾ ಎ ತಂಡದ ವಿರುದ್ಧ ಬೆಂಗಳೂರಿನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 220 ರನ್ ಗಳಿಸಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv