ಲಕ್ನೋ: ಎಲೆಕ್ಟ್ರಾನಿಕ್ ಮತ ಯಂತ್ರದಲ್ಲಿನ ದೋಷದಿಂದ ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆದ್ದಿದೆ ಎಂದು ಬಿಎಸ್‍ಪಿ ನಾಯಕಿ ಮಾಯಾವತಿ ಗಂಭೀರ ಆರೋಪ ಮಾಡಿದ್ದಾರೆ.
ಮಧ್ಯಾಹ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಹುತೇಕ ಮುಸ್ಲಿಮ್ ಪ್ರಾಬಲ್ಯ ಇರುವ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದೆ. ಈ ರೀತಿಯ ಫಲಿತಾಂಶ ಬರಲು ಸಾಧ್ಯವೇ ಇಲ್ಲ. ಬಿಜೆಪಿ ಹೊರತು ಬೇರೆ ಪಕ್ಷಗಳಿಗೆ ಹಾಕಿದ ಮತವನ್ನು ಇವಿಎಂ ಸ್ವೀಕರಿಸಿಲ್ಲ ಅಥವಾ ಎಲ್ಲ ಮತಗಳು ಬಿಜೆಪಿಗೆ ಬರುವಂತೆ ಇವಿಎಂ ಸಿದ್ಧಪಡಿಸಿರಬೇಕು ಎಂದು ಅವರು ಪ್ರಶ್ನೆ ಮಾಡಿದ್ದಾರೆ.
Advertisement
ಬಿಎಸ್‍ಪಿ ಶೇ. 22ರಷ್ಟು ಮತಗಳನ್ನು ಗಳಿಸಿದೆ ಆದರೆ ಕೇವಲ 18 ಸ್ಥಾನಗಳನ್ನು ಮಾತ್ರ ಗಳಿಸಲು ಹೇಗೆ ಸಾಧ್ಯ ಎಂದು ಅವರು ಮತ್ತೊಂದು ಪ್ರಶ್ನೆ ಕೇಳಿದ್ದಾರೆ.
Advertisement
ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾದ 10 ಅಂಶಗಳು
Advertisement
ಚುನಾವಣಾ ಆಯೋಗ ಉತ್ತರ ಪ್ರದೇಶದ ಫಲಿತಾಂಶವನ್ನು ತಡೆಹಿಡಿಯಬೇಕು. ಇವಿಎಂ ಯಂತ್ರಗಳನ್ನು ತನಿಖೆಗೆ ಒಳಪಡಿಸಿ ಫಲಿತಾಂಶ ಬರುವವರೆಗೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದರು.
Advertisement
ಈ ಫಲಿತಾಂಶವನ್ನು ರದ್ದು ಪಡಿಸಿ ಬ್ಯಾಲೆಟ್ ಪೇಪರ್‍ನಲ್ಲಿ ಮತ್ತೊಮ್ಮೆ ಚುನಾವಣೆ ನಡೆಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಮಾಯಾವತಿ ಪತ್ರ ಬರೆದಿದ್ದಾರೆ.
ಇದನ್ನೂ ಓದಿ: ಬಿಹಾರ ಚುನಾವಣೆಯ ಸೋಲಿನ ಪಾಠದಿಂದಾಗಿ ಉತ್ತರಪ್ರದೇಶದಲ್ಲಿ ಜಯಭೇರಿ ಬಾರಿಸಿತು ಬಿಜೆಪಿ. ಪಕ್ಷ ಸಂಘಟನೆಯಾಗಿದ್ದು ಹೇಗೆ?