ಲಕ್ನೋ: ದಲಿತ ಸಿಖ್ ಸಮುದಾಯದ ಚರಣ್‍ಜಿತ್‍ಸಿಂಗ್ ಚನ್ನಿ ಅವರನ್ನು ಪಂಜಾಬ್‍ನ ಮುಖ್ಯಮಂತ್ರಿಯನ್ನಾಗಿ ಮಾಡಿರುವುದು ಕಾಂಗ್ರೆಸ್‍ನ ಚುನಾವಣಾ ತಂತ್ರವಗಿದೆ. ಕಾಂಗ್ರೆಸ್‍ನ ಈ ನಡೆ ಬಗ್ಗೆ ದಲಿತರು ಎಚ್ಚರಿಕೆಯಿಂದ ಇರಬೇಕು ಎಂದು ಬಿಎಸ್‍ಪಿ (Bahujan Social Party) ಅಧ್ಯಕ್ಷೆ ಮಾಯಾವತಿ (mayawati) ಹೇಳಿದ್ದಾರೆ. ಇದನ್ನೂ ಓದಿ: ಅಧಿಕಾರಿಗಳು ಇರುವುದೇ ನಮ್ಮ ಚಪ್ಪಲಿ ಎತ್ತಿಕೊಳ್ಳಲು: ಉಮಾಭಾರತಿ
ಆ ಪಕ್ಷವು, ಪಂಜಾಬ್‍ನಲ್ಲಿ ಮುಂಬರಲಿರುವ ವಿಧಾನಸಭಾ ಚುನಾವಣೆಯನ್ನು ಚನ್ನಿ ನೇತೃತ್ವದಲ್ಲಿ ಎದುರಿಸುವುದಿಲ್ಲ. ಬದಲಾಗಿ, ದಲಿತೇತರರ ನಾಯಕತ್ವದಲ್ಲಿ ಎದುರಿಸಲಿದೆ. ಕಾಂಗ್ರೆಸ್ (Congress) ಪಕ್ಷಕ್ಕೆ ಈಗಲೂ ದಲಿತ ಸಮುದಾಯವರ ಮೇಲೆ ನಂಬಿಕೆ ಇಲ್ಲ. ಹೀಗಾಗಿ, ಅದರ ದ್ವಿಮುಖ ನೀತಿಯ ಬಗ್ಗೆ ಹುಷಾರಾಗಿರಬೇಕು. ಪಂಜಾಬ್ ಇರಲಿ, ಉತ್ತರಪ್ರದೇಶ ಇರಲಿ ಅಥವಾ ಬೇರಾವುದೇ ರಾಜ್ಯವಿರಲಿ, ಜಾತಿವಾದಿ ಪಕ್ಷಗಳು ದಲಿತರಿಗೆ, ಹಿಂದುಳಿದವರಿಗೆ ಏನೇ ಸ್ಥಾನ ನೀಡುತ್ತಿವೆ ಎಂದರೂ ಅದು ಸ್ವಾರ್ಥಕ್ಕಾಗಿಯೇ ಹೊರತು ದಲಿತರ ಏಳಿಗೆಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಾಕ್ ಗೂಢಾಚಾರಿ ಜಿತೇಂದರ್ ಸಿಂಗ್ ಕಾಟನ್ ಪೇಟೆಯನ್ನೇ ಆಯ್ಕೆ ಮಾಡ್ಕೊಂಡಿದ್ದೇಕೆ..?
ಬಿಜೆಪಿ(BJP) ವಿರುದ್ಧವೂ ವಾಗ್ದಾಳಿ ನಡೆಸಿದ ಮಾಯಾವತಿ, ಮುಂದಿನ ವರ್ಷ ವಿಧಾನಸಭೆ (election)ಚುನಾವಣೆ ನಡೆಯುತ್ತಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿಂದುಳಿದವರ ಮೇಲೆ ಏಕಾಏಕಿ ಪ್ರೀತಿ ಹುಟ್ಟಿಕೊಂಡಿದೆ. ಆ ಪಕ್ಷಕ್ಕೆ ನಿಜವಾಗಿಯೂ ಹಿಂದುಳಿದವರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದಿದ್ದರೆ ಕೇಂದ್ರದಲ್ಲಿ ಹಾಗೂ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿನ ಬ್ಯಾಕ್‍ಲಾಗ್ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದರು. ಜಾತಿ ಆಧಾರಿತ ಜನಗಣತಿಯನ್ನೂ ಒಪ್ಪಿಕೊಳ್ಳುತ್ತಿದ್ದರು ವಾಗ್ದಾಳಿ ಮಾಡಿದ್ದಾರೆ.