Saturday, 21st July 2018

Recent News

ನಾನು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ: ಬಿಎಸ್‍ಪಿ ನಾಯಕಿ ಮಾಯಾವತಿ

ನವದೆಹಲಿ: ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಉತ್ತರಪ್ರದೇಶದದಲ್ಲಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯದ ಬಗ್ಗೆ ಮಾತನಾಡಲು ರಾಜ್ಯಸಭೆಯಲ್ಲಿ ಅವಕಾಶ ನೀಡದ್ದಕ್ಕೆ ಇಂದು ರಾಜೀನಾಮೆ ನೀಡುವುದಾಗಿ ಮಾಯಾವತಿ ತಿಳಿಸಿದರು.

ಕಲಾಪದಲ್ಲಿ ಮಾತನಾಡಿದ ಅವರು, ಉತ್ತರಪ್ರದೇಶದ ಸಹರಾನ್ಪುರನಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಹೀಗಾಗಿ ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ನೀಡದೇ ಇದ್ದರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು.

ಈ ವೇಳೆ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಮಾತನಾಡಿ ರಾಜೀನಾಮೆ ಬೆದರಿಕೆ ಹಾಕುವ ಮೂಲಕ ಸದನಕ್ಕೆ ಅವಮಾನ ಮಾಡಿದ್ದೀರಿ. ಕೂಡಲೇ ನೀವು ಕ್ಷಮೆ ಕೇಳಬೇಕು ಎಂದು ಮಾಯಾವತಿ ಅವರಿಗೆ ಹೇಳಿದರು.

ಸಿಪಿಎಂ ಪಕ್ಷದ ಸೀತರಾಮ್ ಯಚೂರಿ ಪ್ರತಿಕ್ರಿಯಿಸಿ ಈ ಸರ್ಕಾರ ದಲಿತ ಮತ್ತು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಸುತ್ತಿದೆ. ಅಲ್ಪಸಂಖ್ಯಾತರು ಮತ್ತು ದಲಿತರು ಅಪಾಯದಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜೀನಾಮೆ ನೀಡುವ ಬೆದರಿಕೆ ಹಾಕಿದ ಬೆನ್ನಲ್ಲೇ ಮಾಯಾವತಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಟಾಪಿಕ್ ಆಗಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *