ಕೀವ್: ದಕ್ಷಿಣ ಉಕ್ರೇನ್‌ನ ಮೆಲಿಟೊಪೋಲ್‌ನ ಮೇಯರ್ ಅವರನ್ನು ರಷ್ಯಾದ ಸೈನಿಕರು ಅಪಹರಿಸಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ತಿಳಿಸಿದ್ದಾರೆ.
10 ಆಕ್ರಮಿತರ ಗುಂಪು ಮೆಲಿಟೊಪೋಲ್‌ನ ಮೇಯರ್ ಇವಾನ್ ಫೆಡೋರೊವ್ ಅವರನ್ನು ಅಪಹರಿಸಿದೆ ಎಂದು ಉಕ್ರೇನ್ ಸಂಸತ್ ಟ್ವಿಟ್ಟರ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ನಾನೊಬ್ಬ ಅಧ್ಯಕ್ಷ, ಆದರೆ ಅದಕ್ಕೂ ಮೊದಲು 2 ಮಕ್ಕಳ ತಂದೆ: ಉಕ್ರೇನ್ ಅಧ್ಯಕ್ಷ
Advertisement
Advertisement
ಮೇಯರ್ ಅವರು ನಗರದ ಬಿಕ್ಕಟ್ಟಿನ ಕೇಂದ್ರದಲ್ಲಿ ಮೂಲಸೌಕರ್ಯ ಪೂರೈಕೆಯಲ್ಲಿನ ಸಮಸ್ಯೆಗಳ ಬಗ್ಗೆ ವ್ಯವಹರಿಸುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದೆ. ಶುಕ್ರವಾರ ತಡರಾತ್ರಿ ವೀಡಿಯೋ ಸಂದೇಶವೊಂದರಲ್ಲಿ ಝೆಲೆನ್‌ಸ್ಕಿ ಅಪಹರಣವನ್ನು ದೃಢಪಡಿಸಿದ್ದಾರೆ.
Advertisement
ಇದು ನಿಸ್ಸಂಶಯವಾಗಿ ಆಕ್ರಮಣಕಾರರ ದೌರ್ಬಲ್ಯದ ಸಂಕೇತವಾಗಿದೆ. ಅವರು ಕಾನೂನುಬದ್ಧ ಸ್ಥಳೀಯ ಉಕ್ರೇನಿಯನ್ ಅಧಿಕಾರಿಗಳ ಪ್ರತಿನಿಧಿಗಳನ್ನು ಹಿಂಸಿಸುವ ಪ್ರಯತ್ನಿಸುತ್ತಿರುವ ಭಯೋತ್ಪಾದನೆಯ ಹೊಸ ಹಂತಕ್ಕೆ ತಲುಪಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ರಷ್ಯಾ ಉಕ್ರೇನ್ ಮೇಲೆ ವ್ಯಾಕ್ಯೂಮ್ ಬಾಂಬ್ ಹಾಕುವುದು ಖಚಿತ ಎಂದ ಬ್ರಿಟನ್
Advertisement
ಮೇಯರ್ ಅಪಹರಣವು ನಿರ್ದಿಷ್ಟ ವ್ಯಕ್ತಿ, ಸಮುದಾಯ, ಉಕ್ರೇನ್ ವಿರುದ್ಧ ಮಾತ್ರವಲ್ಲ. ಪ್ರಜಾಪ್ರಭುತ್ವದ ವಿರುದ್ಧ ಎಸಗಿದ ಅಪರಾಧವಾಗಿದೆ. ರಷ್ಯಾದ ಆಕ್ರಮಣಕಾರಕ ಕೃತ್ಯಗಳು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರಂತಿದೆ ಎಂದು ಟೀಕಿಸಿದ್ದಾರೆ.