ಧನಂಜಯ್ ಅಭಿನಯದ ‘ಗುರುದೇವ್ ಹೊಯ್ಸಳ’ ಚಿತ್ರದಲ್ಲಿ ತಮ್ಮ ನಟನೆಯ ಮೂಲಕ ಎಲ್ಲರ ಗಮನಸೆಳೆದಿದ್ದ ಮಯೂರಿ ನಟರಾಜ್ (Mayuri Nataraj), ಇದೀಗ ‘ಇಬ್ಬನಿ ತಬ್ಬಿದ ಇಳೆಯಲಿ’ (Ibbani Dabbida Ilayali) ಚಿತ್ರಕ್ಕೆ ಎರಡನೆಯ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಪರಂವಾ ಸ್ಟುಡಿಯೋಸ್ನಡಿ ರಕ್ಷಿತ್ ಶೆಟ್ಟಿ (Rakshit Shetty) ನಿರ್ಮಿಸಿ, ಚಂದ್ರಜಿತ್ ಬೆಳ್ಳಿಯಪ್ಪ (Chandrajit Belliyappa) ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರವು ಇದೀಗ ಮುಕ್ತಾಯ ಹಂತ ತಲುಪಿದ್ದು, ಚಿತ್ರತಂಡಕ್ಕೆ ಮಯೂರಿ ನಟರಾಜ್ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ:ಸಲ್ಮಾನ್ ಖಾನ್ ನಂಬರ್ ಬ್ಲಾಕ್ ಮಾಡಿದ್ದರಂತೆ ಸಿದ್ಧಾರ್ಥ್ ಶುಕ್ಲಾ ಪ್ರೇಯಸಿ!
ಇದೊಂದು ಪ್ರಮುಖ ಪಾತ್ರವಾಗಿದ್ದು, ಈಗಾಗಲೇ ಮಯೂರಿ ನಟರಾಜ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಮಯೂರಿ ನಟರಾಜ್ ನಟನೆಯ ಭಾಗದ ಚಿತ್ರೀಕರಣ ಮುಕ್ತಾಯವಾಗಲಿದೆ.
ಇದಕ್ಕೂ ಮುನ್ನ ‘ಮ್ಯಾನ್ ಆಫ್ ದಿ ಮ್ಯಾಚ್’, ‘ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ’ ಮತ್ತು ‘ಗುರುದೇವ್ ಹೊಯ್ಸಳ’ ಚಿತ್ರಗಳಲ್ಲಿ ಅಭಿನಯಿಸಿದ್ದ ಮಯೂರಿ ನಟರಾಜ್, ಸಿಟಿಆರ್ ಹೋಟೆಲ್ ನ ಜಾಹೀರಾತಿನಲ್ಲೂ ಕಾಣಿಸಿಕೊಂಡಿದ್ದರು. ಈಗ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ಅವರೊಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.
‘ಇಬ್ಬನಿ ತಬ್ಬಿದ ಇಳೆಯಲಿ’ ಒಂದು ಕಾವ್ಯಾತ್ಮಕ ಪ್ರೇಮಕಥೆಯಾಗಿದ್ದು, ಮೂರು ವಿಭಿನ್ನ ಕಾಲಘಟ್ಟದಲ್ಲಿ ನಡೆಯುವ ಚಿತ್ರವಾಗಿದೆ. ವಿಹಾನ್ ಮತ್ತು ಅಂಕಿತಾ ಅಮರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ ಮತ್ತು ಶ್ರೀವತ್ಸನ್ ಸೆಲ್ವರಾಜನ್ ಅವರ ಛಾಯಾಗ್ರಹಣವಿದೆ.