-ಕೆ.ಸಿ.ವೇಣುಗೋಪಾಲ್ ಬಳಿ ಬಂದು ಮಂತ್ರಿಗಿರಿ ಬೇಡಿಕೆ ಇಟ್ರು ಎಂ.ಬಿ.ಪಾಟೀಲ್, ಬಿ.ಸಿ.ಪಾಟೀಲ್
ಬೆಂಗಳೂರು: ಸಂಪುಟ ವಿಸ್ತರಣೆ ಮಾಡಲಾಗುವುದು ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ ಕೈ ಶಾಸಕರು ಲಾಬಿಗೆ ಮುಂದಾಗುತ್ತಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳು ಬೆಂಗಳೂರಿನಲ್ಲಿ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಇಂದು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ನಗರದ ಕೆ.ಕೆ.ಗೆಸ್ಟ್ ಹೌಸ್‍ನಲ್ಲಿ ಉಳಿದುಕೊಂಡಿದ್ದ ಕೆ.ಸಿ.ವೇಣುಗೋಪಾಲ್ ಅವರನ್ನು ಶಾಸಕರಾದ ಎಂ.ಬಿ.ಪಾಟೀಲ್, ಬಿ.ಸಿ.ಪಾಟೀಲ್ ಸೇರಿದಂತೆ ಅನೇಕ ಶಾಸಕರು ಭೇಟಿ ಮಾಡಿದ್ದಾರೆ. ಈ ವೇಳೆ ತಮಗೆ ಸಚಿವ ಸ್ಥಾನ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರಂತೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
Advertisement
Advertisement
ವೇಣುಗೋಪಾಲ್ ಅವರ ಭೇಟಿಯ ಬಳಿಕ ಮಾತಾಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಏನನ್ನೂ ಹೇಳಲ್ಲ. ಸಂಪುಟದಲ್ಲಿ ತಮಗೆ ಸ್ಥಾನ ಕೊಡುವುದು ಬಿಡುವುದು ಹೈಕಮಾಂಡ್‍ಗೆ ಬಿಟ್ಟ ವಿಚಾರ. ನಾನು ಮತ್ತೆ ಮಂತ್ರಿಯಾಗುತ್ತೇನೆ ಅಂತಾ ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಹಾರಿಕೆ ಉತ್ತರ ಕೊಟ್ಟಿದ್ದಾರೆ.
Advertisement
ಇದೇ ವೇಳೆ ಶಾಸಕ ಬಿ.ಸಿ.ಪಾಟೀಲ್ ಮಾತನಾಡಿ, ಮಂತ್ರಿಗಿರಿ ನೀಡುವಂತೆ ಬೇಡಿಕೆ ಇಟ್ಟಿರುವೆ. ಒಂದು ವೇಳೆ ಸಚಿವ ಸ್ಥಾನ ಸಿಗದಿದ್ದರೆ ಶಾಸಕನಾಗಿಯೇ ಕಾರ್ಯ ನಿರ್ವಹಿಸುತ್ತೇನೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಪರಸ್ಪರ ಭೇಟಿ ಮಾಡಿದ ಬಿ.ಸಿ.ಪಾಟೀಲ್ ಹಾಗೂ ಎಂ.ಬಿ.ಪಾಟೀಲ್ ಮಂದಹಾಸದ ನಗೆಬೀರಿ ಮಾತುಕತೆ ನಡೆಸಿದ್ದರು.
Advertisement
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಕೂಡ ಕೆ.ಸಿ.ವೇಣುಗೋಪಾಲ್ ಭೇಟಿ ಮಾಡಿ ಚರ್ಚಿಸಿದರು. ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಈ ತಿಂಗಳಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ನಿನ್ನೆಯೂ ಇದರ ಬಗ್ಗೆ ಸ್ಪಷ್ಟವಾಗಿ ಹೇಳಿದ್ದೆ. ಎಲ್ಲರೂ ಚರ್ಚೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳುತ್ತೇವೆ ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews