Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿವೃದ್ಧಿ ವಿಷಯದಲ್ಲಿ ಸಂಘರ್ಷ ಬೇಡ – ಸಚಿವ ಎಂ.ಬಿ ಪಾಟೀಲ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಭಿವೃದ್ಧಿ ವಿಷಯದಲ್ಲಿ ಸಂಘರ್ಷ ಬೇಡ – ಸಚಿವ ಎಂ.ಬಿ ಪಾಟೀಲ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ ಭರವಸೆ

Latest

ಅಭಿವೃದ್ಧಿ ವಿಷಯದಲ್ಲಿ ಸಂಘರ್ಷ ಬೇಡ – ಸಚಿವ ಎಂ.ಬಿ ಪಾಟೀಲ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ ಭರವಸೆ

Public TV
Last updated: September 10, 2024 8:45 pm
Public TV
Share
2 Min Read
HD Kumaraswamy
SHARE

ನವದೆಹಲಿ: ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರನ್ನು ದೆಹಲಿಯಲ್ಲಿ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.

ನವದೆಹಲಿಯ (New Delhi) ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ ಪಾಟೀಲ್ ಅವರು, ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಮನವಿ ಮಾಡಿದರು. ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಸಂಪೂರ್ಣ ಸಹಕಾರದ ಭರವಸೆ ಕೊಟ್ಟರು.

HD Kumaraswamy 3

ಪ್ರಮುಖವಾಗಿ ಕರ್ನಾಟಕದಲ್ಲಿ (Karnataka) ಕೈಗಾರಿಕಾ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಸಚಿವರು, ಪಾಟೀಲ್ ಅವರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಲ ಕೈಗಾರಿಕೆಗಳ ಬಗ್ಗೆ ಮನವಿ ಸಲ್ಲಿಸಿದ ಅವರು, ಕೇಂದ್ರ ಸರ್ಕಾರದಿಂದ ಸಿಗಬೇಕಿರುವ ಒಪ್ಪಿಗೆಯ ಬಗ್ಗೆ ಪ್ರಸ್ತಾವನೆಗಳನ್ನು ನೀಡಿದರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ತಕ್ಷಣವೇ ಬಿಡುಗಡೆಗೊಳಿಸಲಿ : ಎಚ್.ಕೆ ಪಾಟೀಲ್ 

ಈ ಸಂದರ್ಭದಲ್ಲಿ ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು (Karnataka Government) ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡುವ ಅಗತ್ಯವಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರ ಸ್ಪಷ್ಟ ನಿರ್ದೇಶನವಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ಎಂ.ಬಿ ಪಾಟೀಲ್ ಅವರಿಗೆ ಹೇಳಿದರು. ಇದನ್ನೂ ಓದಿ: Devara Trailer: ರಕ್ತದಿಂದ ಸಮುದ್ರವೇ ಕೆಂಪಾದ ಕಥೆ ಹೇಳೋಕೆ ಬರುತ್ತಿದ್ದಾರೆ ಜ್ಯೂ.ಎನ್‌ಟಿಆರ್‌, ಜಾನ್ವಿ ಕಪೂರ್‌

HD Kumaraswamy 2

ಕರ್ನಾಟಕದ ಕೈಗಾರಿಕಾ ಯೋಜನೆಗಳ ಬಗ್ಗೆ ಮಾಹಿತಿ ತೆಗೆದುಕೊಂಡ ಸಚಿವರು, ಎಂ.ಬಿ ಪಾಟೀಲ್ ಅವರು ಸಲ್ಲಿಸಿದ ವಿವಿಧ ಪ್ರಸ್ತಾವನೆಗಳ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ರಾಜ್ಯದಲ್ಲಿ ಹೆಚ್ಚು ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾಗಬೇಕು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು. ಇದನ್ನೂ ಓದಿ: ವೃಷಭಾವತಿ ಏತ ನೀರಾವರಿ ಯೋಜನೆ ಕಾಮಗಾರಿ ಚುರುಕುಗೊಳಿಸಲು ಸಚಿವ ಎನ್.ಎಸ್ ಬೋಸರಾಜು ಸೂಚನೆ

ಈ ಸಂದರ್ಭದಲ್ಲಿ HMT ಭೂಮಿ ವಿವಾದ ಹಾಗೂ ದೇವದಾರಿ ಗಣಿಗಾರಿಕೆ ಯೋಜನೆಗಳ ಬಗ್ಗೆಯೂ ಕೇಂದ್ರ ಸಚಿವರು ಪಾಟೀಲ್ ಅವರ ಜತೆ ಚರ್ಚೆ ನಡೆಸಿದರು. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜಕೀಯ ಮೀರಿ ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ನಾನು ಮುಕ್ತ ಮನಸ್ಸು ಹೊಂದಿದ್ದೇನೆ. ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು. ಈ ದಿಸೆಯಲ್ಲಿ ಎಂಬಿ ಪಾಟೀಲ್ ಅವರ ಜತೆ ನಡೆಸಿದ ಮಾತುಕತೆ ಉತ್ತಮ ರೀತಿಯಲ್ಲಿ ಇತ್ತು ಎಂದು ಕೇಂದ್ರ ಕೈಗಾರಿಕೆ ಸಚಿವರು ಹೇಳಿದರು. ಕರ್ನಾಟಕದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಸೇರಿದಂತೆ ರಾಜ್ಯದ ಹಲವು ಅಧಿಕಾರಿಗಳು ನಿಯೋಗದಲ್ಲಿ ಇದ್ದರು.

TAGGED:hd kumaraswamyIndustriesMB PatilNew Delhiಎಂ.ಬಿ.ಪಾಟೀಲ್ಕೈಗಾರಿಕೋದ್ಯಮನವದೆಹಲಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
13 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
1 hour ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?