ವಿಜಯಪುರ: ಯತ್ನಾಳ್ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ಸುಳ್ಳುಗಾರ ಎಂದು ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಿರುದ್ಧ ಸಚಿವ ಎಂ.ಬಿ ಪಾಟೀಲ್ (MB Patil) ವಾಗ್ದಾಳಿ ನಡೆಸಿದ್ದಾರೆ.
ವಿಜಯಪುರದಲ್ಲಿ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ತನ್ವೀರ್ ಪೀರಾ ಅವರು ಯಾವ ಉಗ್ರ ಸಂಘಟನೆಯೊಂದಿಗೂ ಸಂಬಂಧ ಹೊಂದಿಲ್ಲ. ಬೇಕಿದ್ದರೆ ಎನ್‍ಐಎ ತನಿಖೆಗೆ ಕೊಡಲಿ. ಆರೋಪ ಸುಳ್ಳು ಎಂದು ಸಾಬೀತಾದರೆ ಏನು ಮಾಡ್ತಾರೆ? ಎಂಬುದನ್ನು ಅವರು ಹೇಳಲಿ. ನಾವು ಅವರಿಗೆ ದೇಶ ಬಿಟ್ಟು ಹೋಗಿ ಎಂದು ಹೇಳುವುದಿಲ್ಲ. ಈ ಬಗ್ಗೆ ಅವರು ಸ್ಪಷ್ಟನೆ ಕೊಡಲಿ ಎಂದು ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ಬಿಜೆಪಿ ಪಕ್ಷದಲ್ಲಿ ಶಿಸ್ತು ಇಲ್ಲ: ಅಶೋಕ್ ಗೆಹ್ಲೋಟ್
Advertisement
Advertisement
ಮುಖ್ಯಮಂತ್ರಿ ಅವರನ್ನು ನಾನೇ ತನ್ವೀರ್ ಪೀರಾ ಅವರ ಮನೆಗೆ ಕರೆದುಕೊಂಡು ಹೋಗಿದ್ದೆ. ಅವರೊಂದಿಗೆ ನಮ್ಮ ಒಡನಾಟ ಮೊದಲಿನಿಂದಲೂ ಇದೆ. ಯತ್ನಾಳ್ ಹಾಗೂ ತನ್ವೀರ್ ಪೀರಾ ಕುಟುಂಬಸ್ಥರ ಉದ್ಯಮಗಳು ಇದ್ದವು. ಹೋಟೆಲ್ ಹಾಗೂ ಇನ್ನಿತರೆ ಉದ್ಯಮದಲ್ಲಿ ಇವರೊಟ್ಟಿಗೆ ಅನೇಕರು ಪಾಲುದಾರರಾಗಿದ್ದರು. ಯತ್ನಾಳ್ ಈಗ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
Advertisement
Advertisement
ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ಸಿದ್ದರಾಮಯ್ಯ ಅವರು ಮೌಲ್ವಿ ತನ್ವೀರ್ ಪೀರಾ ಅವರಿದ್ದ ಸಭೆಯಲ್ಲಿ ಕಾಣಿಸಿಕೊಂಡಿದ್ದಕ್ಕೆ ಇತ್ತೀಚೆಗೆ ವಾಗ್ದಾಳಿ ನಡೆಸಿದ್ದರು. ಈ ವೇಳೆ ತನ್ವೀರ್ ಪೀರಾ ಅವರಿಗೆ ಐಸಿಸ್ ಉಗ್ರರ ನಂಟಿದೆ ಎಂದು ಆರೋಪಿಸಿದ್ದರು. ಈ ವೇಳೆ ತನ್ವೀರ್ ಪೀರಾ ಅವರೊಂದಿಗಿನ ಉದ್ಯಮದ ಪಾಲುಗಾರಿಕೆ ಇರುವ ಬಗ್ಗೆ ಕೇಳಿದ್ದ ಪ್ರಶ್ನೆಗೆ, ನನಗೆ ಉಗ್ರರೊಂದಿಗೆ ಸಂಪರ್ಕ ಇಲ್ಲ ಎಂದಿದ್ದರು. ಇದನ್ನೂ ಓದಿ: ಅಕ್ಬರುದ್ದೀನ್ ಓವೈಸಿಗೆ ಹಂಗಾಮಿ ಸ್ಪೀಕರ್ ಪಟ್ಟ – ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ ಶಾಸಕರು