ಬೆಂಗಳೂರು: ರಸ್ತೆ ಹಾಗೂ ಪ್ರದೇಶಗಳಿಗೆ ಹಿಂದೂಯೇತರರ ಹೆಸರು ತೆಗೆದು ಹಾಕುವ ವಿಚಾರಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರು ಭಾಗಿಯಾಗಿರಲಿಲ್ಲ. ಕ್ವಿಟ್ ಇಂಡಿಯಾ ಚಳವಳಿ ಸಂದರ್ಭದಲ್ಲಿ ಆರ್‍ಎಸ್‍ಎಸ್‍ನವರು ಬ್ರಿಟಿಷರೊಂದಿಗೆ ಇದ್ದರು. ಅವರು ಈಗ ದೇಶದ ಇತಿಹಾಸ ಗೊತ್ತಿಲ್ಲದೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
Advertisement
Advertisement
ಕೋಮು ಸಾಮರಸ್ಯವನ್ನು ಬಿಜೆಪಿಯವರು ಹಾಳು ಮಾಡುತ್ತಿದ್ದಾರೆ. ಹೀಗೆ ಮಾಡುವುದರಿಂದ ಚುನಾವಣೆಯಲ್ಲಿ ಮತ ಪಡೆಯಬಹುದು ಎಂಬ ಲೆಕ್ಕಾಚಾರದಲ್ಲಿ ಬಿಜೆಪಿಯವರಿದ್ದಾರೆ. ಆದರೆ ಜನರು ಅವರಿಗೆ ಸರಿಯಾದ ಬುದ್ಧಿ ಕಲಿಸುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಧರ್ಮದಂಗಲ್ ಅಭಿಯಾನಕ್ಕೆ ರೋಡ್ ಸೇರ್ಪಡೆ- ಮುಸ್ಲಿಂ ಹೆಸರುಳ್ಳ ರಸ್ತೆಗಳನ್ನು ಬದಲಿಸಲು ಆಗ್ರಹ
Advertisement
Advertisement
ಸಂತೋಷ ಪಾಟೀಲ್ ಡೆತ್ ನೋಟ್ ಬರೆದಿಟ್ಟು ನಾಪತ್ತೆ ಆಗಿರುವ ಬಗ್ಗೆ ಈ ಬಗ್ಗೆ ಸತ್ಯಾಸತ್ಯತೆ ನನಗೆ ಗೊತ್ತಿಲ್ಲ. ಸರ್ಕಾರ, ಸಿಎಂ, ಗೃಹ ಸಚಿವರು ಈ ಬಗ್ಗೆ ಸತ್ಯಾಸತ್ಯತೆ ತಿಳಿದುಕೊಂಡು ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಾನು ಯಾವುದೇ ತಪ್ಪು ಮಾಡಿಲ್ಲ, ಸಂತೋಷ್ ತಪ್ಪು ಮಾಡಿರೋದು : ಈಶ್ವರಪ್ಪ