ಬೆಂಗಳೂರು: ಮೂರು ಡಿಸಿಎಂ ಹುದ್ದೆ ಸೃಷ್ಟಿ ಮಾಡುವ ವಿಚಾರ ಹೈಕಮಾಂಡ್‍ಗೆ ಬಿಟ್ಟಿದ್ದು, ಒಂದು ವೇಳೆ ಹೈಕಮಾಂಡ್ ನನ್ನನ್ನ ಡಿಸಿಎಂ ಆಗು ಎಂದರೆ ಆಗುತ್ತೇನೆ ಎಂದು ಸಚಿವ ಎಂ.ಬಿ ಪಾಟೀಲ್ (M.B Patil) ಡಿಸಿಎಂ (DCM) ಪಟ್ಟದ ಆಸೆ ವ್ಯಕ್ತಪಡಿಸಿದ್ದಾರೆ.
ಸಚಿವ ರಾಜಣ್ಣ ಅವರ 3 ಡಿಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದು ರಾಜ್ಯ ಮಟ್ಟದಲ್ಲಿ ಆಗುವುದಿಲ್ಲ. ಹೈಕಮಾಂಡ್ ಮಟ್ಟದಲ್ಲಿ ಆಗಬೇಕು. ಹೈಕಮಾಂಡ್ ಮನಸ್ಸು ಮಾಡಿದರೆ ಮೂರು ಇಲ್ಲವೇ ನಾಲ್ಕು ಡಿಸಿಎಂ ಮಾಡಬಹುದು. ಇಲ್ಲವೇ ಮಾಡದೇಯೂ ಇರಬಹುದು. ಅಂತಿಮವಾಗಿ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಮಾಡಲಿದೆ ಎಂದಿದ್ದಾರೆ. ಇದನ್ನೂ ಓದಿ: ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು: M.B ಪಾಟೀಲ್
3 ಡಿಸಿಎಂ ಬೇಕಾ? ಬೇಡವಾ? ಎಂದು ನಾನು ಪಕ್ಷದ ಸಭೆಯಲ್ಲಿ ಹೇಳುತ್ತೇನೆ. ರಾಜಣ್ಣ ಅವರ ಹೇಳಿಕೆಯ ಸಾಧಕ-ಬಾಧಕ ನೋಡಿಕೊಂಡು ಹೈಕಮಾಂಡ್ ತೀರ್ಮಾನ ಮಾಡಲಿದೆ. ಈ ಚುನಾವಣೆಯಲ್ಲಿ ಎಲ್ಲಾ ಸಮುದಾಯ ಕಾಂಗ್ರೆಸ್ ಜೊತೆ ನಿಂತಿದೆ. ಹೀಗಾಗಿ 135 ಸ್ಥಾನ ಬಂದಿದೆ. ರಾಜಣ್ಣ ಅವರು ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಹೇಳಿದ್ದಾರೆ. ಅಂತಿಮವಾಗಿ ಹೈಕಮಾಂಡ್ ಇದರ ಬಗ್ಗೆ ತೀರ್ಮಾನ ಮಾಡುತ್ತದೆ. 135 ಸೀಟು ಜನ ಬಹುಮತ ಕೊಟ್ಟಿದ್ದಾರೆ. ರಾಜ್ಯ ಚುನಾವಣೆ ವಿಷಯ ಬೇರೆ, ಲೋಕಸಭೆ ವಿಷಯ ಬೇರೆ. ಕೇಂದ್ರ, ವಿಧಾನಸಭೆಯಲ್ಲಿ ಬೇರೆ ಬೇರೆ ವಿಷಯದ ಆಧಾರದಲ್ಲಿ ನಡೆಯುತ್ತದೆ. ಈ ವಿಷಯದಲ್ಲಿ ಹಿನ್ನಡೆ ಆಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಯಲ್ಲಿ 15-20 ಕ್ಷೇತ್ರ ಗೆಲ್ಲಲಿದೆ. ಎಷ್ಟೋ ಕಡೆ ಬಿಜೆಪಿಗೆ ಅಭ್ಯರ್ಥಿಗಳೇ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಡಿಸಿಎಂ ಹುದ್ದೆ ವಿಚಾರವಾಗಿ, ಎಲ್ಲರಿಗೂ ಆಸೆ ಇದ್ದೇ ಇರುತ್ತದೆ. ಆದರೆ ದುರಾಸೆ ಇರಬಾರದು. ಹೈಕಮಾಂಡ್ ಡಿಸಿಎಂ ಆಗಿ ಎಂದರೆ ಆಗುತ್ತೇನೆ. ಆದರೆ ಕೂಸು ಹುಟ್ಟೋಕು ಮುನ್ನ ಕುಲಾವಿ ಹೊಲಿಸೋದು ಬೇಡ. ರಾಜಣ್ಣ ಹೇಳಿದ್ದು ತಪ್ಪಲ್ಲ, ನಮ್ಮಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಅಭಿಪ್ರಾಯ ಹೇಳೋಕೆ ಅವಕಾಶ ಇದೆ. ರಾಜಣ್ಣ ಹೇಳಿಕೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅನೇಕ ಸಮುದಾಯಕ್ಕೆ ರಾಜಕೀಯ ಸ್ಥಾನ ನೀಡಲು ಇನ್ನೂ ಆಗಿಲ್ಲ. ಸವದಿ, ರಾಯರೆಡ್ಡಿ, ದೇಶಪಾಂಡೆ, ಜಯಚಂದ್ರ ಎಲ್ಲರೂ ಮಂತ್ರಿ ಆಗೋಕೆ ಸಮರ್ಥರು. ನಂಬರ್ ಸೀಮಿತ ಆಗಿರುವುದರಿಂದ ಮಂತ್ರಿಗೆ ಸೀಮಿತ ಮಾಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಎರಡು ಸಲ ನೀರು ಬಿಟ್ಟು ಈಗ ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ: ಬೊಮ್ಮಾಯಿ ಆಕ್ರೋಶ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]