ಬೆಂಗಳೂರು: ರಾಜ್ಯ ರಾಜಧಾನಿಯ ಸಮೀಪ ನಿರ್ಮಿಸಲು ಉದ್ದೇಶಿಸಿರುವ 2ನೇ ಏರ್ಪೋರ್ಟ್ ಸಂಬಂಧ ಮೂರೂ ಸ್ಥಳಗಳ ಪರಿಶೀಲನೆ ನಡೆಸಿರುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (AAI) ಉನ್ನತ ಮಟ್ಟದ ತಂಡವು ಇನ್ನೊಂದು ತಿಂಗಳಲ್ಲಿ ತನ್ನ ಅಭಿಪ್ರಾಯ ತಿಳಿಸುವ ಸಾಧ್ಯತೆ ಇದೆ. ಬಳಿಕ ಇದನ್ನು ವಿಸ್ತೃತ ಅಧ್ಯಯನಕ್ಕೆ ವಿಮಾನ ನಿಲ್ದಾಣಗಳ ಅಭಿವೃದ್ಧಿಪಡಿಸುವಂತಹ ಪರಿಣಿತ ಕಂಪನಿಗಳ ಮುಂದೆ ಕೊಂಡೊಯ್ಯಲಾಗುವುದು. ಬಳಿಕ ಸರ್ಕಾರವು ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಅಂತಿಮಗೊಳಿಸಲಿದೆ ಎಂದು ಮೂಲಸೌಕರ್ಯಗಳ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎಎಐ ತಂಡ ಬಂದು ಹೋಗಿರುವುದು ನಿಜ. ವಿಮಾನ ನಿಲ್ದಾಣವನ್ನು (Airport) ಎಲ್ಲಿ ಮಾಡಿದರೆ ಸೂಕ್ತ? ಪ್ರಯಾಣಿಕರ ದಟ್ಟಣೆ, ಕಾರ್ಗೋ ದಟ್ಟಣೆ ಮತ್ತು ಕೈಗಾರಿಕಾ ಅಗತ್ಯ ಮುಂತಾದ ಅಂಶಗಳನ್ನು ಅವಲಂಬಿಸಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಆಡಳಿತದಲ್ಲಿ ಕಮಿಷನ್ ದಂಧೆ ವಿಧಾನಸೌಧದ ಮೆಟ್ಟಿಲು ಮುಟ್ಟಲು ಬಿಟ್ಟಿರಲಿಲ್ಲ: ಹೆಚ್‌ಡಿಕೆ
ಈಗ ದೇವನಹಳ್ಳಿ ಬಳಿ ವಿಮಾನ ನಿಲ್ದಾಣವಿದೆ. 2033ರ ವರೆಗೂ ಇಲ್ಲಿಂದ 150 ಕಿ.ಮೀ. ಅಂತರದಲ್ಲಿ ಇನ್ನೊಂದು ಏರ್ಪೋರ್ಟ್ ಮಾಡಬಾರದು ಎನ್ನುವ ಷರತ್ತಿದೆ. ನಾವು ಈಗಿನಿಂದಲೇ ಪ್ರಾರಂಭಿಸಿದರೆ, 2030ರ ವೇಳೆಗೆ 2ನೇ ಏರ್ಪೋರ್ಟ್ ಅಭಿವೃದ್ಧಿ ಮಾಡಬಹುದು. ಇಲ್ಲದೇ ಹೋದ್ರೆ 2040ನೇ ಇಸವಿ ಬಂದರೂ ವಿಮಾನ ನಿಲ್ದಾಣ ಆಗುವುದಿಲ್ಲ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಮುಂದಿನ ದಿನಗಳಲ್ಲಿ ಭಾರೀ ಇಳಿಕೆಯಾಗಲಿದೆ ಟಿವಿ, ಫ್ರಿಡ್ಜ್, ಮೊಬೈಲ್ ಬೆಲೆ!
ಹಿರಿಯ ನಾಯಕ ಟಿ.ಬಿ ಜಯಚಂದ್ರ (TB Jayachandra) ಅವರು ತಮ್ಮ ಕ್ಷೇತ್ರವಾದ ಶಿರಾ ಸಮೀಪ ಏರ್ಪೋರ್ಟ್ ಬರಲೆಂದು ಪ್ರಯತ್ನ ಶುರು ಮಾಡಿದ್ದಾರೆ. ಅಲ್ಲಿ ಜಿಲ್ಲಾ ಮಟ್ಟದ ಏರ್ಪೋರ್ಟ್ ಮಾಡಬಹುದೇ ವಿನಾ ಅದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (International Airport) ಆಗುವುದಿಲ್ಲ. ಬಿಜೆಪಿಯ ಅರವಿಂದ ಬೆಲ್ಲದ್ ಕೂಡ ಉತ್ತರ ಕರ್ನಾಟಕಕ್ಕೆ ಅನುಕೂಲವಾಗುವ ಜಾಗದಲ್ಲಿ ಹೊಸ ಏರ್ಪೋರ್ಟ್ ಬರಲಿ ಎನ್ನುತ್ತಿದ್ದಾರೆ. ಕೇವಲ ಜಾಗವನ್ನು ಕೊಟ್ಟ ಮಾತ್ರಕ್ಕೆ ಎಲ್ಲವೂ ಆಗುವುದಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಇದನ್ನೂ ಓದಿ: ಗುತ್ತಿಗೆದಾರರು ಕಮಿಷನ್ ಆರೋಪದ ಸಾಕ್ಷಿ ಕೊಟ್ಟರೆ ತನಿಖೆ ಮಾಡಿಸುತ್ತೇವೆ – ಕೃಷ್ಣಬೈರೇಗೌಡ
ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. ಸುಪ್ರೀಂ ಕೋರ್ಟಿನಲ್ಲಿ ಪರಿಸರ ಇಲಾಖೆಯ ಅನುಮತಿ ಸಂಬಂಧ ಒಂದು ಪ್ರಕರಣವಿದೆ. ಅದು ಸದ್ಯದಲ್ಲೇ ಇತ್ಯರ್ಥಗೊಳ್ಳುವ ಲಕ್ಷಣಗಳಿವೆ. ಇದಾದರೆ, ಇನ್ನು 6 ತಿಂಗಳಲ್ಲಿ ಉದ್ಘಾಟನೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ರಾಣಾನಿಗೆ ಬಿರಿಯಾನಿ ಕೊಡಬೇಡಿ: ಮುಂಬೈ ದಾಳಿಯಲ್ಲಿ ಜನರ ರಕ್ಷಣೆಗೆ ನೆರವಾಗಿದ್ದ ಚಹಾ ಮಾರಾಟಗಾರ ಒತ್ತಾಯ