ಉಡುಪಿ: ಎಂಬಿಎ ಪದವಿ ಪಡೆದಿದ್ದರೂ ವಿದ್ಯಾರ್ಹತೆಗೆ ಸೂಕ್ತ ಉದ್ಯೋಗ ಸಿಗದ ಹಿನ್ನೆಲೆ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಕಾಪು ತಾಲೂಕಿನಲ್ಲಿ ನಡೆದಿದೆ.
Advertisement
ದ.ಕ ಜಿಲ್ಲೆ ಉಪ್ಪಿನಂಗಡಿ ಮೂಲದ ಸಹನಾ (23) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಒಂದೂವರೆ ವರ್ಷದ ಹಿಂದೆ ಎಂಬಿಎ ಪದವಿ ಮುಗಿಸಿದ್ದಳು. ಆಕೆಗೆ ಸೂಕ್ತ ಕೆಲಸ ಸಿಕ್ಕಿರಲಿಲ್ಲ. ಏಪ್ರಿಲ್ 30 ರಂದು ಶಿರ್ವ ಸಮೀಪದ ಕಟ್ಟಿಂಗೇರಿ ಗ್ರಾಮದ ಸಹೋದರಿ ಸೌಮ್ಯ ಅವರ ಮನೆಗೆ ಬಂದಿದ್ದ ಸಹನಾ ಅಲ್ಲೇ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೆÇಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಎಮ್ಮೆಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಬಸ್ ಪಲ್ಟಿ
Advertisement
Advertisement
ಮೇ 1ರ ಬೆಳಗ್ಗೆ ಸಹನಾ ವಿಪರೀತ ವಾಂತಿ ಮಾಡಿದ್ದು, ಹೀಗಾಗಿ ಆಕೆಯನ್ನು ಉಡುಪಿ ನಗರದ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಂತರ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಆಕೆಯ ಸ್ಥಿತಿ ಚಿಂತಾಜನಕ ಹಂತಕ್ಕೆ ತಲುಪಿದ್ದರಿಂದ ಮೇ 7 ರಂದು ಉಡುಪಿಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಹನಾ ಅವರನ್ನು ಸ್ಥಳಾಂತರಿಸಲಾಯಿತು. ಮೇ 9 ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಹಿಳೆ ಕತ್ತು ಹಿಸುಕಿ ಸಮಾಧಿ ಮಾಡಲು ಹೋಗಿ ತಾನೇ ಸತ್ತ
Advertisement
ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕಾಂಗ್ರೆಸ್ ಇಂದು ಸಂಜೆ ಉಡುಪಿಯಲ್ಲಿ ಪ್ರತಿಭಟನೆ ನಡೆಸಲಿದೆ. ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ರಾಜ್ಯ, ಕೇಂದ್ರ ಸರಕಾರ ಯುವಕರಿಗೆ ಉದ್ಯೋಗ ಸೃಷ್ಟಿಸದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದೆ.