ನಿದ್ರೆ ಮಾತ್ರೆ ಸೇವಿಸಿ MBBS ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Public TV
1 Min Read
BDR SUICIDE

ಬೀದರ್: ನಿದ್ರೆ ಮಾತ್ರೆ ಸೇವಿಸಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ವೈದ್ಯಕೀಯ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ.

ಉಮಾದೇವಿ ಆತ್ನಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ. ಬೀದರ್ ತಾಲೂಕಿನ ಚಿಟ್ಟವಾಡಿ ಗ್ರಾಮದ ನಿವಾಸಿಯಾಗಿದ್ದ ಉಮಾದೇವಿ ಬೀದರ್ ನ ವೈದ್ಯಕೀಯ ಮೆಡಿಕಲ್ ಕಾಲೇಜಿನಲ್ಲಿ 3 ಸೇಮಿಸ್ಟರ್  ಓದುತ್ತಿದ್ದಳು. ಆದರೆ ರಾತ್ರಿ ಹಾಸ್ಟೆಲ್‍ನಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

BDR 2

ಉಮಾದೇವಿ ರಾತ್ರಿ ಊಟ ಮಾಡಿ ಮಲಗಿದ್ದು, ತಡರಾತ್ರಿ ಎದ್ದು ಸ್ನೇಹಿತರಿಗೆ ತಿಳಿಯದಂತೆ ನಿದ್ರೆ ಮಾತ್ರೆ ಸೇವಿಸಿ ಮತ್ತೆ ಮಲಗಿಕೊಂಡಿದ್ದಾಳೆ. ಮುಂಜಾನೆ ಸ್ನೇಹಿತರು ಎಬ್ಬಿಸಲು ಹೋದಾಗ ಉಮಾದೇವಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಳು. ತಕ್ಷಣ ಆಕೆಯನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಪರೀಕ್ಷೆ ಮಾಡಿ ಸಾವನ್ನಪ್ಪಿದ್ದಾಳೆ ಎಂದು ತಿಳಿಸಿದ್ದಾರೆ.

ಎಂಬಿಬಿಎಸ್ ನ 2ನೇ ಸೆಮಿಸ್ಟರ್ ಫಲಿತಾಂಶ ಬಂದಿದ್ದು, ಅದರಲ್ಲಿ ಉಮಾದೇವಿ ಫೇಲ್ ಆಗಿದ್ದಳು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಇತ್ತ ಆಸ್ಪತ್ರೆಯಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

BDR 1

Share This Article