ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ನ ಎರಡನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಪುನೀತ್ ಗಾಯಗೊಂಡ ವಿದ್ಯಾರ್ಥಿ. ಹುಬ್ಬಳ್ಳಿ ಕಿಮ್ಸ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ. ಈತ ಕುಡಿದ ಮತ್ತಿನಲ್ಲಿ ಕಿಮ್ಸ್ ಆವರಣದಲ್ಲಿನ ಆನಂದ ಹಾಸ್ಟೆಲ್ನ ಎರಡನೆಯ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ಇದನ್ನೂ ಓದಿ: ಹೈಜಾಕ್ ಮಾಡೋದಕ್ಕೆ ಮೇಕೆದಾಟು ಯೋಜನೆಯನ್ನು ಹೆಚ್ಡಿಕೆ ಮಾಡಿದ್ರಾ: ಸಿದ್ದರಾಮಯ್ಯ ತಿರುಗೇಟು
ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದ್ದು, ಈತನಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸುವ ಸಲುವಾಗಿ ವೈದ್ಯರು ಸಮಾಲೋಚನೆ ನಡೆಸಿದ್ದಾರೆ. ಘಟನೆಯ ಕುರಿತು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಾಜಿ ಸಿಎಂ ಎಚ್ಡಿಕೆ ಒಳ್ಳೆಯ ನಾಯಕ ಹಾಗೂ ಸಾಹಿತಿ: ಡಿಕೆಶಿ ವ್ಯಂಗ್ಯ