ತಿರುವನಂತಪುರಂ: ಕೇರಳದ (Kerala) ಎರ್ನಾಕುಲಂ (Ernakulam) ಸರ್ಕಾರಿ ವೈದ್ಯಕೀಯ ಕಾಲೇಜಿನ (Medical College) ಹಾಸ್ಟೆಲ್ ರೂಮ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮೃತ ಯುವತಿಯನ್ನು ಕಾಸರಗೋಡು (Kasaragod) ಮೂಲದ ಅಂಬಿಲಿ (25) ಎಂದು ಗುರುತಿಸಲಾಗಿದೆ. ಆಕೆ ಕಲಮಸ್ಸೇರಿಯಲ್ಲಿ ಮೂರನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಶನಿವಾರ ಹಾಸ್ಟೆಲ್ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದ್ದು, ಇದನ್ನು ಗಮನಿಸಿದ ಆಕೆಯ ಸ್ನೇಹಿತೆಯರು ಹಾಸ್ಟೆಲ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: Bengaluru | ಕುಟುಂಬ ಕಲಹದಿಂದ ಮಾನಸಿಕವಾಗಿ ನೊಂದು ಟೆಕ್ಕಿ ಆತ್ಮಹತ್ಯೆ
ಇದು ಆತ್ಮಹತ್ಯೆಯಾಗಿರಬಹುದು ಪೊಲೀಸರು ಶಂಕಿಸಿದ್ದಾರೆ. ಆಕೆ ಮಾನಸಿಕ ತೊಂದರೆ ಮತ್ತು ಕಲಿಕಾ ನ್ಯೂನತೆ ಸಮಸ್ಯೆಗಳಿಂದ ಬಳಲುತ್ತಿದ್ದಳು. ಆದರೂ ಈ ಅಂಶಗಳು ದೃಢಪಟ್ಟಿಲ್ಲ. ಇನ್ನೂ ಕಳೆದ ಕೆಲವು ದಿನಗಳಿಂದ ಆಕೆ ಮೌನವಾಗಿರುತ್ತಿದ್ದಳು ಎಂದು ಆಕೆಯ ಸ್ನೇಹಿತೆಯರು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಮರಣೋತ್ತರ ಪರೀಕ್ಷೆಯ ನಂತರ ಯುವತಿಯ ಶವವನ್ನು ಆಕೆಯ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಯುವತಿಯ ಸಾವಿನ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಸಂಬಂಧ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಡಿವೋರ್ಸ್ ಬಳಿಕ ಪತ್ನಿಗೆ ಜೀವನಾಂಶ ಹೊಂದಿಸಲು ದರೋಡೆಗೆ ಯತ್ನ – ಮಾಜಿ ಪತಿ ಸೇರಿ ಮೂವರು ಅರೆಸ್ಟ್