ಮಾನಸಿಕ ಖಿನ್ನತೆಗೆ ಒಳಗಾಗಿ MBBS ವಿದ್ಯಾರ್ಥಿ ಆತ್ಮಹತ್ಯೆ

Public TV
1 Min Read
mbbs student

ಬಳ್ಳಾರಿ: ವಿಮ್ಸ್ ಹಾಸ್ಟೆಲ್‍ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಎಂಬಿಬಿಎಸ್ ಅಂತಿಮ ವರ್ಷ ವ್ಯಾಸಾಂಗ ಮಾಡುತ್ತಿದ್ದ ಶ್ರೇಯಸ್ ಜೋಶಿ(25) ವಿಮ್ಸ್ ಹಾಸ್ಟೆಲ್‍ನ ತನ್ನ ರೂಮ್‍ನಲ್ಲಿ ನೇಣಿಗೆ ಶರಣಾಗಿದ್ದಾನೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದಲ್ಲಿ ಶ್ರೇಯಸ್ ವಾಸಿಸುತ್ತಿದ್ದನು.

1600x960 130171 mbbs

‘ಬೈಪೋಲಾರ್ ಡಿಸಾರ್ಡರ್ ಕಾಯಿಲೆ’ಯಿಂದ ಶ್ರೇಯಸ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು. ಅಲ್ಲದೇ ಮನೆಯವರ ಒತ್ತಾಯಕ್ಕೆ ಎಂಬಿಬಿಎಸ್ ಮಾಡುತ್ತಿದ್ದನು. ಒಲ್ಲದ ಮನಸ್ಸಿನಿಂದ ಎಂಬಿಬಿಎಸ್ ಓದಿದ್ದು, ಇದೇ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ಸಿಎಂ ಸ್ಥಾನ ಲಾಬಿಗೆ ಅವಕಾಶವಿಲ್ಲ, ಯತ್ನಾಳ್ ಹೇಳಿಕೆ ತಪ್ಪು: ರೇಣುಕಾಚಾರ್ಯ 

bij police jeep 2

ಶ್ರೇಯಸ್ ಆತ್ಮಹತ್ಯೆಗೆ ಶರಣಾಗುವ ಮುನ್ನ ತನ್ನ ಅಕ್ಕ ಶ್ರದ್ದಾಗೆ ಕಾಲ್ ಮಾಡಿದ್ದ ಎಂದು ತಿಳಿದುಬಂದಿದೆ. ಈ ಕುರಿತು ಹಾಸ್ಟೆಲ್ ವಿದ್ಯಾರ್ಥಿ ಹಾಗೂ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಹಾಗೂ ವಿಮ್ಸ್ ವೈದ್ಯಾಧಿಕಾರಿಗಳು ಹಾಸ್ಟೆಲ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share This Article
Leave a Comment

Leave a Reply

Your email address will not be published. Required fields are marked *