ನವದೆಹಲಿ: ಜನರ ತೀರ್ಪನ್ನು ನಾವು ನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಪಂಚರಾಜ್ಯದಲ್ಲಿ ಕೈ ಪಕ್ಷಕ್ಕೆ ಭಾರೀ ಮುಖಭಂಗವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಚುನಾವಣೆ ಫಲಿತಾಂಶದಿಂದ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ರಾಹುಲ್ ಗಾಂಧಿ ಟ್ವಿಟ್ಟರ್ನಲ್ಲಿ, ಜನರ ತೀರ್ಪನ್ನು ನಾವು ನಮ್ರತೆಯಿಂದ ಸ್ವೀಕರಿಸುತ್ತಿದ್ದೇನೆ. ಜನ ಮತ್ತು ದೇಶವನ್ನು ಗೆದ್ದವರಿಗೆ ಶುಭಾಶಯಗಳು ಎಂದು ಹಾರೈಸಿದ್ದಾರೆ.
Humbly accept the people’s verdict. Best wishes to those who have won the mandate.
My gratitude to all Congress workers and volunteers for their hard work and dedication.
We will learn from this and keep working for the interests of the people of India.
— Rahul Gandhi (@RahulGandhi) March 10, 2022
ನಮ್ಮ ಪಕ್ಷಕ್ಕಾಗಿ ದುಡಿದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರಿಗೆ ಅವರ ಶ್ರಮ ಮತ್ತು ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು. ನಾವು ಈ ಸೋಲಿನಿಂದ ಕಲಿಯುತ್ತೇವೆ. ನಾವು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಪಂಚರಾಜ್ಯ ಚುನಾವಣೆ ಫಲಿತಾಂಶದಲ್ಲಿ ಭಾರೀ ಸೋಲನ್ನು ಅನುಭವಿಸಿದೆ. ಪಂಜಾಬ್ ನಲ್ಲಿ ಎಎಪಿ ಮತ್ತು ಉಳಿದ ನಾಲ್ಕು ರಾಜ್ಯದಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದೆ. ಆದರೆ ಒಂದೇ ಒಂದು ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿಲ್ಲ. ಗೋವಾದಲ್ಲಿ ಮಾತ್ರ ಬಿಜೆಪಿಗೆ ಸ್ವಲ್ಪಮಟ್ಟಿಗೆ ಪೈಪೋಟಿಯನ್ನು ಕೊಟ್ಟಿತ್ತು. ಆದರೆ ಕೊನೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತು. ಅಲ್ಲದೇ ಉತ್ತರಪ್ರದೇಶದಂತಹ ದೊಡ್ಡ ರಾಜ್ಯದಲ್ಲೇ ಕಾಂಗ್ರೆಸ್ಗೆ 2 ಸ್ಥಾನ ಸಿಕ್ಕಿರುವುದು ಎಲ್ಲರಲ್ಲಿಯೂ ಆಶ್ಚರ್ಯ ಮೂಡಿಸಿದೆ.