- ಐತಿಹಾಸಿಕ ವಾಂಖೆಡೆಗೆ ಸೆಡ್ಡು ಹೊಡೆಯುತ್ತಾ ಸ್ಟೇಡಿಯಂ
ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಮಾನೆ ಗ್ರಾಮದಲ್ಲಿ ದೇಶದಲ್ಲೇ 2ನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ (New Cricket Stadium) ನಿರ್ಮಿಸಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ (MCA) ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರೋಹಿತ್ ನಾಯಕತ್ವದಲ್ಲಿ WTC ಫೈನಲ್, ಚಾಂಪಿಯನ್ಸ್ ಟ್ರೋಫಿ ಗೆಲ್ಲುತ್ತೇವೆ: ಜಯ್ ಶಾ ವಿಶ್ವಾಸ
Advertisement
ಮುಂಬೈ ಕ್ರಿಕೆಟ್ ಅಸೋಸಿಯೇಷನ್ 1 ಲಕ್ಷ ಆಸನಗಳ ಸಾಮರ್ಥ್ಯದ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಎದುರುನೋಡುತ್ತಿದೆ. ಥಾಣೆ ಜಿಲ್ಲೆಯಿಂದ ಸುಮಾರು 26 ಕಿಮೀ ಹಾಗೂ ವಾಂಖೆಡೆ ಕ್ರೀಡಾಂಗಣದಿಂದ (Wankhede Stadium) 68 ಕಿಮೀ ದೂರದಲ್ಲಿರುವ ಅಮಾನೆ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಈಗಾಗಲೇ ಸ್ಟೇಡಿಯಂ ನಿರ್ಮಾಣಕ್ಕೆ ಅಗತ್ಯವಿರುವ 50 ಎಕೆರೆ ಭೂಪ್ರದೇಶ ಸ್ವಾಧೀನಕ್ಕೆ ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ ಟೆಂಡರ್ ಭರ್ತಿಯಾಗಿದ್ದು, ಸರ್ಕಾರದ ಅನುಮೋದನೆಗಾಗಿ ಕಾಯುತ್ತಿದೆ ಎಂದು ತಿಳಿದುಬಂದಿದೆ.
Advertisement
Advertisement
ಶುಕ್ರವಾರ (ಜು.5) ಟಿ20 ವಿಶ್ವಕಪ್ ವಿಜೇತ ತಂಡದ ಭಾಗವಾಗಿರುವ ನಾಲ್ವರು ಆಟಗಾರರ ಅಭಿನಂದನಾ ಸಮಾರಂಭದಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಈ ಬಗ್ಗೆ ಮಾತನಾಡಿದ್ದರು. ಅತ್ಯಾಧುನಿಕ ಹಾಗೂ ಬೃಹತ್ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಪರಿಗಣಿಸುವಂತೆ ಸಿಎಂ ಏಕನಾಥ್ ಶಿಂಧೆ (Eknath shinde) ಅವರಿಗೆ ಮನವಿ ಮಾಡಿದ್ದೇವೆ. ಮುಂಬೈನಲ್ಲಿ 1 ಆಸನಗಳ ಸಾಮರ್ಥ್ಯದ ಕ್ರೀಡಾಂಗಣ ಅವಶ್ಯಕತೆಯಿದೆ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.
Advertisement
ಮುಂಬೈನಲ್ಲಿ ಬೃಹತ್ ಕ್ರೀಡಾಂಗಣ ನಿರ್ಮಿಸಬೇಕು ಎಂಬುದು ಎಂಸಿಎ ಮಾಜಿ ಅಧ್ಯಕ್ಷ ಅಮೋಲ್ ಕಾಳೆ ಅವರ ಕನಸಿನ ಯೋಜನೆಯಾಗಿತ್ತು. ಅವರ ನೆನಪಿನಾರ್ಥವಾಗಿ ಕ್ರೀಡಾಂಗಣ ನಿರ್ಮಾಣವಾಗಬೇಕು ಎಂದು ಹೇಳಿದ್ದರು. ಇದನ್ನೂ ಓದಿ: T20 ಏಷ್ಯಾಕಪ್ ಟೂರ್ನಿಗೆ ಭಾರತ ಮಹಿಳಾ ತಂಡ ಪ್ರಕಟ – ಕನ್ನಡತಿ ಶ್ರೇಯಾಂಕಾಗೆ ಸ್ಥಾನ!
ಸದ್ಯ ಅಹಮದಾಬಾದ್‌ನ ಮೊಟೇರಾದಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣ 1.32 ಲಕ್ಷ ಆಸನಗಳ ಸಾಮರ್ಥ್ಯ ಹೊಂದಿದ್ದು, ದೇಶದ ಅತಿದೊಡ್ಡ ಕ್ರೀಡಾಂಗಣ ಎನಿಸಿಕೊಂಡಿದೆ. ಇದನ್ನೂ ಓದಿ: ಬಿಸಿಸಿಐ ಬಳಿಕ ಮಹಾರಾಷ್ಟ್ರ ಸರ್ಕಾರದಿಂದಲೂ ಟೀಂ ಇಂಡಿಯಾ ಆಟಗಾರರಿಗೆ ಬಂಪರ್ ಗಿಫ್ಟ್!