ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಶಾಸಕ, ಕಾಂಗ್ರೆಸ್ ಒಬಿಸಿ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್ ಗುಡ್ ಬೈ ಹೇಳಲು ಮುಂದಾಗಿದ್ದಾರೆ.
ಶಾಸಕರ ಭವನದಲ್ಲಿ ಆಪ್ತರ ಜೊತೆ ಸಭೆ ಬಳಿಕ ಮಾತನಾಡಿದ ಅವರು, ಮೂರು ಬಾರಿ ನನಗೆ ಮಾತು ಕೊಟ್ಟು ದ್ರೋಹ ಮಾಡಿದ್ದರು. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ನನಗೆ ಮೋಸ ಮಾಡಿದ್ದರು. ಹೀಗಾಗಿ ನಮ್ಮ ಅಭಿಮಾನಿಗಳ ಜೊತೆ ಸಭೆ ಮಾಡಿ, ರಾಜಕೀಯ ತೀರ್ಮಾನ ಮಾಡಿದ್ದೇನೆ ಎಂದರು.
ಕಾಂಗ್ರೆಸ್ ಪಕ್ಷ ಬಿಡಲು ತೀರ್ಮಾನ ಮಾಡಿದ್ದೇನೆ. ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿ ಪಕ್ಷವೂ ನನಗೆ ಆಹ್ವಾನ ಕೊಟ್ಟಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಕೊಡಗಿನ 2 ಕಡೆ ಮೊಟ್ಟೆ ದಾಳಿ
ಒಂದು ಕಾಲದಲ್ಲಿ ಬಿಎಸ್ವೈ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಲಕ್ಷ್ಮಿ ನಾರಾಯಣ್, ಇತ್ತೀಚೆಗಷ್ಟೇ ಡಿಕೆಶಿ ಹಾಗೂ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ಗುಡುಗಿದ್ದರು. ಪರಿಷತ್ ಸ್ಥಾನ ಸಿಗದೆ ಇದ್ದಿದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು.
Live Tv
[brid partner=56869869 player=32851 video=960834 autoplay=true]