ಬೆಂಗಳೂರು: ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಪಚುನಾವಣೆಯಲ್ಲಿ ಉಗ್ರಪ್ಪ ಜಯ ಸಾಧಿಸಿದ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ ಎಂದು ಟ್ವೀಟ್ ಮಾಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟ್ಟರಿನಲ್ಲಿ, “ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ. ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ. ನಾಡಬಾಂಧವರಿಗೆ ದೀಪಾವಳಿಯ ಶುಭಾಶಯಗಳು” ಎಂದು ಟ್ವೀಟ್ ಮಾಡಿ ಗೆಲುವನ್ನು ಸಂಭ್ರಮಿಸಿದ್ದಾರೆ.
Advertisement
ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ.
ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ.
ನಾಡಬಾಂಧವರಿಗೆ
ದೀಪಾವಳಿಯ ಶುಭಾಶಯಗಳು.@INCKarnataka
— Siddaramaiah (@siddaramaiah) November 6, 2018
Advertisement
ಇತ್ತ ಉಪಚುನಾವಣೆಯಲ್ಲಿ ಗೆದ್ದ ಆನಂದ ನ್ಯಾಮಗೌಡ ಅವರನ್ನು ಸಿದ್ದರಾಮಯ್ಯ ಟ್ವಿಟ್ಟರಿನಲ್ಲಿ ಶುಭಾಶಯ ತಿಳಿಸಿದ್ದಾರೆ. ಸಿದ್ದರಾಮಯ್ಯ ತಮ್ಮ ಟ್ವಿಟ್ಟರಿನಲ್ಲಿ, “ಜಮಖಂಡಿ ವಿಧಾನಸಭಾ ಉಪಚುನಾವಣೆಯಲ್ಲಿ ಜಯಗಳಿಸಿರುವ ಆನಂದ ನ್ಯಾಮಗೌಡ ಅವರಿಗೆ ಅಭಿನಂದನೆಗಳು. ಪಕ್ಷದ ಜಯಕ್ಕಾಗಿ ಶ್ರಮಿಸಿದ ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು. ನಮ್ಮ ಅಭ್ಯರ್ಥಿಯನ್ನು ಆಶೀರ್ವದಿಸಿದ ಕ್ಷೇತ್ರದ ಮತದಾರರಿಗೆ ಕೃತಜ್ಞತೆಗಳು” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Advertisement
ಜಮಖಂಡಿ ವಿಧಾನಸಭಾ ಉಪಚುನಾವಣೆಯಲ್ಲಿ ಜಯಗಳಿಸಿರುವ ಆನಂದ ನ್ಯಾಮಗೌಡ ಅವರಿಗೆ ಅಭಿನಂದನೆಗಳು. ಪಕ್ಷದ ಜಯಕ್ಕಾಗಿ ಶ್ರಮಿಸಿದ ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು. ನಮ್ಮ ಅಭ್ಯರ್ಥಿಯನ್ನು ಆಶೀರ್ವದಿಸಿದ ಕ್ಷೇತ್ರದ ಮತದಾರರಿಗೆ ಕೃತಜ್ಞತೆಗಳು. #Jamakhandi @INCKarnataka
— Siddaramaiah (@siddaramaiah) November 6, 2018
Advertisement
ಸಿದ್ದರಾಮಯ್ಯ ತಮ್ಮ ಮತ್ತೊಂದು ಟ್ವೀಟ್‍ನಲ್ಲಿ ಬಳ್ಳಾರಿ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ಬಳ್ಳಾರಿಯ ಜನತಾ ಜನಾರ್ದನರಿಗೆ ಧನ್ಯವಾದಗಳು. ಜನಾರ್ದನ ರೆಡ್ಡಿಯವರ ಅಮಾನವೀಯ ನಡೆ-ನುಡಿಗೆ ಬಳ್ಳಾರಿ ಜನರೇ ಶಾಪ ನೀಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಬಳ್ಳಾರಿಯ ಜನತಾ ಜನಾರ್ಧನರಿಗೆ ಧನ್ಯವಾದಗಳು.
ಜನಾರ್ಧನ ರೆಡ್ಡಿಯವರ ಅಮಾನವೀಯ ನಡೆ-ನುಡಿಗೆ ಬಳ್ಳಾರಿ ಜನರೇ ಶಾಪ ನೀಡಿದ್ದಾರೆ.@INCKarnataka
— Siddaramaiah (@siddaramaiah) November 6, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv