ಬೆಂಗಳೂರು: ಸರ್ವೋದಯ ದಿನದ ಪ್ರಯುಕ್ತ ಜ.30ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
Advertisement
ಜ.30ರ ಭಾನುವಾರ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಜಂಟಿ ನಿರ್ದೇಶಕರು (ಪಶುಪಾಲನೆ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ಕೇಂದ್ರ ಸರ್ಕಾರ ಮಾಡುತ್ತಿದೆ: ಎಚ್‍ಡಿಕೆ ವಾಗ್ದಾಳಿ
Advertisement
Advertisement
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹುತಾತ್ಮರಾದ ದಿನವನ್ನು ʻಸರ್ವೋದಯ ದಿನʼವನ್ನಾಗಿ ಆಚರಿಸಲಾಗುವುದು. ಗಾಂಧೀಜಿಯವರು ಶಾಂತಿ ಪ್ರಿಯರು, ಅಹಿಂಸಾವಾದಿಗಳು. ಆ ದಿನ ಎಲ್ಲೆಡೆ ಗಾಂಧೀಜಿ ಸ್ಮರಣೆ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಅಂದು ಪ್ರಾಣಿ ವಧೆ, ಮಾಂಸ ಮಾರಾಟಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಇದನ್ನೂ ಓದಿ: ಆಳುವುದು ಬೇರೆ, ಆಡಳಿತ ಬೇರೆ ಈ ವ್ಯತ್ಯಾಸ ಇದೀಗ ಕರ್ನಾಟಕದಲ್ಲಿ ಕಾಣಬಹುದಾಗಿದೆ: ಬೊಮ್ಮಾಯಿ