ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ (VK Saxena) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ, ನರ್ಮದಾ ಬಚಾವೋ ಆಂದೋಲನದ (Narmada Bachao Andolan) ನಾಯಕಿ ಮೇಧಾ ಪಾಟ್ಕರ್ (Medha Patkar) ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
ದೆಹಲಿಯ ಸಾಕೇತ್ ನ್ಯಾಯಾಲಯ ಆದೇಶ ಪ್ರಕಟಿಸಿದ್ದು, ಆದೇಶದಿಂದಾಗಿ ಎರಡು ವರ್ಷ ಜೈಲು ಶಿಕ್ಷೆ, ದಂಡ ಅಥವಾ ಎರಡನ್ನೂ ಶಿಕ್ಷೆಯಾಗಿ ವಿಧಿಸುವ ಸಾಧ್ಯತೆಯಿದೆ.
Advertisement
Advertisement
ಅಹಮದಾಬಾದ್ ಮೂಲದ ಸರ್ಕಾರೇತರ ಸಂಸ್ಥೆ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್ ಮುಖ್ಯಸ್ಥರಾಗಿದ್ದ ವಿ.ಕೆ ಸಕ್ಸೆನಾ ನರ್ಮದಾ ಬಚಾವೋ ಆಂದೋಲನ ವಿರುದ್ಧ ಜಾಹೀರಾತುಗಳನ್ನು ಪ್ರಕಟಿಸಿದ್ದರು.
Advertisement
ಈ ವೇಳೆ ಮಾಧ್ಯಮಗಳಲ್ಲಿ ವಿ.ಕೆ ಸಕ್ಸೆನಾ ವಿರುದ್ಧ ಮೇಧಾ ಪಾಟ್ಕರ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ಸಕ್ಸೆನಾ ಮಾನನಷ್ಟ ಪ್ರಕರಣ ಹೂಡಿದ್ದರು. ವಿಕೆ ಸಕ್ಸೇನಾ ಮತ್ತು ಮೇಧಾ ಪಾಟ್ಕರ್ 2000 ನೇ ಇಸ್ವಿಯಿಂದ ಕಾನೂನು ಸಮರ ನಡೆಸುತ್ತಿದ್ದಾರೆ.
Advertisement