CrimeDistrictsKarnatakaKolarLatestLeading NewsMain Post

ಹಾಸ್ಟೆಲ್‍ನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮೆಡಿಕಲ್ ವಿದ್ಯಾರ್ಥಿಯ ಶವ ಪತ್ತೆ – ಕೊಲೆ ಶಂಕೆ

Advertisements

ಕೋಲಾರ: ಅನುಮಾನಾಸ್ಪದ ರೀತಿಯಲ್ಲಿ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಯ ಶವ ಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ನಗರ ಹೊರ ವಲಯದ ಟಮಕದಲ್ಲಿರುವ ದೇವರಾಜ ಅರಸು ಮೆಡಿಕಲ್ ಕಾಲೇಜು ಹಾಸ್ಟೆಲ್‍ನಲ್ಲಿ ಘಟನೆ ನಡೆದಿದೆ. ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅನ್ನೋದು ಹಾಸ್ಟೇಲ್ ವಿದ್ಯಾರ್ಥಿಗಳ ಮಾತಾಗಿದ್ದು, ರಾಜಸ್ಥಾನ ಮೂಲದ ಪ್ರದೀಪ್ ಶರ್ಮಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಅಂತಿಮ ವರ್ಷದ ಫಾರೆನ್ಸಿಕ್ ಮೆಡಿಕಲ್ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಕತ್ತು ಕೊಯ್ದ ರೀತಿಯಲ್ಲಿ ಶವ ಪತ್ತೆಯಾಗಿದೆ. ಇದನ್ನೂ ಓದಿ: ಐಷಾರಾಮಿ ಮದ್ವೆ, 3 ತಿಂಗಳಲ್ಲಿ ಸಂಸಾರ ಬೀದಿಗೆ – ಪತ್ನಿಯನ್ನು ಮನೆಯಿಂದ ಹೊರಹಾಕಿದ ಕುಡುಕ ಪತಿ!

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಾಗಾಗಿ ಆತ್ಮಹತ್ಯೆಯೋ ಅಥವಾ ಕೊಲೆಯೋ ಅನ್ನೋ ಅನುಮಾನ ಎದ್ದಿದೆ. ಗಲ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಶಿಕ್ಷಕಿ ಕೊಲೆ ಪ್ರಕರಣ- ನಗರಸಭೆ ಕೌನ್ಸಿಲರ್ ಸೇರಿ ನಾಲ್ವರ ಬಂಧನ

Live Tv

Leave a Reply

Your email address will not be published.

Back to top button