ರಾಮನಗರ: ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಶಿಫ್ಟ್‌ಗೆ ವಿರೋಧಿಸಿ ಸೆಪ್ಟೆಂಬರ್ 8ಕ್ಕೆ ರಾಮನಗರ ಬಂದ್‌ಗೆ ಕರೆ ನೀಡಿರುವ ಕುರಿತು ರಾಮನಗರ (Ramanagara) ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಪ್ರತಿಕ್ರಿಯೆ ನೀಡಿದರು.
ನಮ್ಮ ಕಾಲೇಜು, ನಮ್ಮ ಯೂನಿವರ್ಸಿಟಿ ಇಲ್ಲೇ ಇರುತ್ತದೆ. ಅದಕ್ಕಾಗಿ ಬಂದ್ ಮಾಡುವುದರಲ್ಲಿ ಅರ್ಥ ಇಲ್ಲ. ನಾನು ವೈದ್ಯಕೀಯ ಸಚಿವ ಶರಣಪ್ರಕಾಶ್ ಅವರನ್ನು ಭೇಟಿ ಆಗಿದ್ದೇನೆ. ಡಿಕೆ ಸುರೇಶ್ (DK Suresh) ಹಾಗೂ ನಾನು ಇಬ್ಬರೂ ಅವರ ಜೊತೆ ಮಾತನಾಡಿದ್ದೇವೆ. ಮೆಡಿಕಲ್ ಕಾಲೇಜು ರಾಮನಗರದಲ್ಲೇ ಉಳಿಯುತ್ತೆ. ಸಚಿವರೇ ಬಂದು ಗುದ್ದಲಿ ಪೂಜೆ ಮಾಡುತ್ತಾರೆ. ಸುರೇಶ್ ಅವರ ನೇತೃತ್ವದಲ್ಲಿ ನಾನೇ ಆ ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: ಆದಿತ್ಯ L1 ಮಿಷನ್‍ನ ಯಶಸ್ವಿ ಉಡಾವಣೆಗೆ ರಾಜ್ಯಪಾಲ ಅಭಿನಂದನೆ
Advertisement
Advertisement
ಈ ಕಾಲೇಜಿಗೂ ಕನಕಪುರ ಕಾಲೇಜಿಗೂ ಸಂಬಂಧ ಇಲ್ಲ. ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು 20 ವರ್ಷದ ಹಿಂದೆ ಆಗಿರೋದು. ಆದರೆ ಕನಕಪುರಕ್ಕೆ ಮಂಜೂರಾಗಿದ್ದ ಕಾಲೇಜು ಚಿಕ್ಕಬಳ್ಳಾಪುರಕ್ಕೆ ಶಿಪ್ಟ್ ಆಗಿತ್ತು. ಈಗ ಮತ್ತೆ ಕನಕಪುರಕ್ಕೆ ನಮ್ಮ ನಾಯಕರು ಹೊಸ ಕಾಲೇಜು ತರುತ್ತಾರೆ. ರಾಜೀವ್ ಗಾಂಧಿ ಮೆಡಿಕಲ್ ಕಾಲೇಜಿಗೂ ಅದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಇಸ್ರೋಗೆ ಜಾಗ ಕೊಟ್ಟಿದ್ದು ಕಾಂಗ್ರೆಸ್: ಬಿ.ಕೆ ಹರಿಪ್ರಸಾದ್
Advertisement
Advertisement
ಇದರಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನವರು ರಾಜಕೀಯ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಟೇಕಫ್ ಆಗ್ತಾ ಇದೆ. ಕಾಂಗ್ರೆಸ್ ಬಗ್ಗೆ ಜನರಿಗೆ ಒಳ್ಳೆಯ ಆಸಕ್ತಿ, ವಿಶ್ವಾಸ ಇದೆ. ಇಷ್ಟೆಲ್ಲಾ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆಯಲ್ವಾ ಎನ್ನುವ ಹೊಟ್ಟೆಕಿಚ್ಚಿಗೆ ಹೀಗೆಲ್ಲಾ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: Aditya L1 ಮಿಷನ್ ಯಶಸ್ವಿ: ಇಸ್ರೋ ಅಧ್ಯಕ್ಷ
Web Stories