ಬಳ್ಳಾರಿ: ಪಾನಮತ್ತರಾಗಿ ನಶೆಯಲ್ಲೇ ಆಸ್ಪತ್ರೆಗೆ ಬರುತ್ತಿದ್ದ ತಾಲೂಕು ವೈದ್ಯಾಧಿಕಾರಿಯನ್ನು (Medica Officer) ಅಮಾನತು ಮಾಡಲಾಗಿದೆ.
ಬಳ್ಳಾರಿ (Bellary) ಜಿಲ್ಲೆಯ ಸಿರಗುಪ್ಪ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಈರಣ್ಣ ನಿತ್ಯ ಕುಡಿದು ಬಂದು ಆಸ್ಪತ್ರೆಯಲ್ಲಿ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಕಿರಿ ಕಿರಿ ಉಂಟು ಮಾಡುತ್ತಿದ್ದರು. ಅನುಚಿತವಾಗಿ ವರ್ತನೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿತ್ತು. ಇದನ್ನೂ ಓದಿ: ವಾಯುಭಾರ ಕುಸಿತದ ಎಫೆಕ್ಟ್; ತಮಿಳುನಾಡಿನಾದ್ಯಂತ ಭಾರೀ ಮಳೆ, ಪ್ರವಾಹ ಮುನ್ಸೂಚನೆ!
ಈ ಬಗ್ಗೆ ‘ಪಬ್ಲಿಕ್ ಟಿವಿ’ಯಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಆಯುಕ್ತಾಲಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ತಾಲೂಕು ವೈದ್ಯಾಧಿಕಾರಿ ಡಾ. ಈರಣ್ಣ ಅವರನ್ನ ಅಮಾನತು ಮಾಡಿ ಆದೇಶಿಸಲಾಗಿದೆ.
ಸಿರಗುಪ್ಪ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿಯಾಗಿದ್ದ ಡಾ. ಈರಣ್ಣ ನಿತ್ಯವೂ ಪಾನಮತ್ತರಾಗಿ, ನಶೆಯಲ್ಲೇ ಆಸ್ಪತ್ರೆಗೆ ಬರುತ್ತಿದ್ದರು. ಅಲ್ಲದೇ, ಸಿಬ್ಬಂದಿ ಹಾಗೂ ಸಾರ್ವಜನಿಕರ ಜೊತೆ ಅನುಚಿತವಾಗಿ ವರ್ತನೆ ಮಾಡುತ್ತಿದ್ದರು. ನಶೆಯಲ್ಲೇ ಚೇಂಬರ್‌ನಲ್ಲಿ ಕುಳಿತು ಟೇಬಲ್ ಗುದ್ದಿ, ಅಸಭ್ಯವಾಗಿ ವರ್ತನೆ ತೋರಿದ್ದರು. ಈ ಕುರಿತು ‘ಪಬ್ಲಿಕ್ ಟಿವಿ’ಯಲ್ಲಿ ವಿಸ್ತೃತ ವರದಿ ಪ್ರಸಾರವಾಗಿತ್ತು. ಇದನ್ನೂ ಓದಿ: ಬಿಜೆಪಿ ಸರ್ಕಾರ ಪಂಚಮಸಾಲಿಗರಿಗೆ ಟೋಪಿ ಹಾಕಿದ್ದಾರೆ – ಸಿದ್ದರಾಮಯ್ಯ