ಮೆಡಿಕಲ್ ಸ್ಟೋರ್‌ನಲ್ಲಿ ಅಗ್ನಿ ಅವಘಡ- 10 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ಔಷಧಿ, ಪೀಠೋಪಕರಣ ಹಾನಿ

Public TV
1 Min Read
TMK MEDICAL 2

ತುಮಕೂರು: ಜಿಲ್ಲೆಯ ಯಲ್ಲಾಪುರದ ಮಡಿಕಲ್ ಸ್ಟೋರೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಔಷಧಿಗಳು ಹಾಗೂ ಪೀಠೋಪಕರಣಗಳು ಬೆಂಕಿಗಾಹುತಿಯಾಗಿದೆ.

TMK MEDICAL 3

ಬಾಲಾಜಿ ಮೆಡಿಕಲ್ ಸ್ಟೋರ್‍ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡ ಪರಿಣಾಮ ಮೆಡಿಕಲ್‍ನಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸುಮಾರು 5 ಲಕ್ಷ ರೂ. ಮೌಲ್ಯದ ಔಷಧಿಗಳು ಸೇರಿದಂತೆ 10 ಲಕ್ಷ ರೂಪಾಯಿಗೂ ಹೆಚ್ಚು ಬೆಲೆಬಾಳುವ ಪೀಠೋಪಕರಣಗಳು ಸುಟ್ಟು ಕರಕಲಾಗಿದೆ. ಮೆಡಿಕಲ್‍ಗೆ ಹೊತ್ತಿಕೊಂಡಿದ್ದ ಬೆಂಕಿ ತೀವ್ರಗೊಂಡ ಪರಿಣಾಮ ಪಕ್ಕದಲ್ಲಿದ್ದ ಕ್ಲಿನಿಕ್‍ಗೂ ಬೆಂಕಿ ತಗುಲಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

TMK MEDICAL 1 1

ಘಟನೆ ಕುರಿತು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅನಾಹುತಕ್ಕೆ ಕಾರಣವೇನು ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article