ಹೈದರಾಬಾದ್: ರ‍್ಯಾಗಿಂಗ್ (Ragging) ಹಿನ್ನೆಲೆಯಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು (Medical Student) ಆತ್ಮಹತ್ಯೆ ಶರಣಾದ ಘಟನೆ ತೆಲಂಗಾಣದ (Telangana) ಹೈದರಾಬಾದ್‍ನಲ್ಲಿ ನಡೆದಿದೆ.
ಡಿ. ಪ್ರೀತಿ (26) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದಳು. ಈ ವೇಳೆ ಆಕೆ ಸಿನಿಯರ್ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್‍ಗೆ ಒಳಗಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಮನನೊಂದು ವಿದ್ಯಾರ್ಥಿನಿ ಪ್ರೀತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆ ವೇಳೆ ಎಂಜಿಎಂ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಿದ ನಂತರ ಪ್ರೀತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ ಆಗಿದ್ದಳು.
Advertisement
Advertisement
ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‍ಗೆ ದಾಖಲಿಸಲಾಗಿತ್ತು. ಆದರೆ 4 ದಿನಗಳ ನಂತರ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪ್ರೀತಿಯ ತಂದೆಯ ದೂರಿನ ಮೇರೆಗೆ 2ನೇ ಸ್ನಾತಕೋತ್ತರ ವಿದ್ಯಾರ್ಥಿ ಮೊಹಮ್ಮದ್ ಅಲಿ ಸೈಫ್‍ನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
Advertisement
ಪ್ರೀತಿ ಸಿನಿಯರ್ ವಿರುದ್ಧ ಕಾಲೇಜು ಹಾಗೂ ಆಸ್ಪತ್ರೆಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಆಕೆಯ ತಂದೆ ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಯಕಯೋಗಿಗಳಿಂದ ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜು
Advertisement
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಎಸ್‍ಸಿ, ಎಸ್‍ಟಿ ರಾಷ್ಟ್ರೀಯ ಆಯೋಗವು ಸರ್ಕಾರ, ಎಂಜಿಎಂ ಆಸ್ಪತ್ರೆಯ ಸೂಪರಿಂಟೆಂಡೆಂಟ್, ಪ್ರಾಂಶುಪಾಲರು ಮತ್ತು ವಿಭಾಗದ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಕೇಸರಿಮಯವಾದ ಕುಂದಾನಗರಿ ಬೆಳಗಾವಿ- ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಬಾವುಟ ಹಾರಾಟ