ಹಾವೇರಿ: ಕಾರು (Car) ಮತ್ತು ಲಾರಿ (Lorry) ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲನೆ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ (Medical Student) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ (Haveri) ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶಿಗ್ಗಾಂವಿ (Shiggavi) ತಾಲೂಕಿನ ಬಂಕಾಪುರ (Bankapura) ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಖಿಲ್ ಕುಂಬಾರ (27) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿ ಅಖಿಲ್ ಮೂಲತಃ ಬೆಂಗಳೂರು ನಿವಾಸಿಯಾಗಿದ್ದು, ಬೆಳಗಾವಿಯಲ್ಲಿ ಎಂಬಿಬಿಎಸ್ ಮುಗಿಸಿದ್ದು, ಎಂ.ಡಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಫ್ಲೈಓವರ್‌ನಿಂದ ರೈಲ್ವೇ ಹಳಿಗೆ ಬಿದ್ದ ಕಾರು – ಐವರಿಗೆ ಗಂಭೀರ ಗಾಯ
ಭಾನುವಾರ ಬೆಳಗಾವಿಯಿಂದ (Belagavi) ದಾವಣಗೆರೆಗೆ (Davanagere) ಹೋಗುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬಂಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಕಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು – ಹೊರಬರಲಾರದೆ ಚಾಲಕ ಸಜೀವದಹನ
Web Stories