ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಸಾಕಷ್ಟು ಬಿರುಗಾಳಿ ಎಬ್ಬಿಸಿದ್ದ ಮೀಟೂ ಪ್ರಕರಣದಲ್ಲಿ ಬಹುಭಾಷಾ ನಟ ಅರ್ಜುನ್ ಸರ್ಜಾಗೆ ಬಿಗ್ ರಿಲೀಫ್ ಸಿಕ್ಕಿದೆ.
ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟನ್ನು ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ಅಂಗೀಕರಿಸಿದೆ. ಅರ್ಜುನ್ ಸರ್ಜಾ ವಿರುದ್ಧ ಅಷ್ಟೆಲ್ಲಾ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ ಕೂಡ ಪೊಲೀಸರ ಬಿ ರಿಪೋರ್ಟ್ಗೆ ಆಕ್ಷೇಪಣೆ ಸಲ್ಲಿಸಿಲ್ಲ. ಹೀಗಾಗಿ ಕೋರ್ಟ್ ಬಿ-ರಿಪೋರ್ಟ್ ಅಂಗೀಕರಿಸಿದೆ.
Advertisement
Advertisement
2018ರಲ್ಲಿ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮೀಟೂ ಕೇಸ್ ದಾಖಲಿಸಿದ್ದರು. ಆದ್ರೆ, ನಟಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಸೂಕ್ತ ಸಾಕ್ಷಾಧಾರಗಳು ಸಿಗದ ಹಿನ್ನೆಲೆ, ಪೊಲೀಸ್ರು ಕೋರ್ಟ್ಗೆ ಬಿ-ರಿಪೋರ್ಟ್ ಸಲ್ಲಿಸಿದ್ದರು. ಇದನ್ನೂ ಓದಿ: ಇನ್ಸ್ಟಾಗ್ರಾಮ್ನಲ್ಲಿ 30 ಕೋಟಿ ಫಾಲೋವರ್ಸ್ ಹೊಂದಿದ ವಿಶ್ವದ ಮೊದಲ ಮಹಿಳೆ ಇವರೇ!