ಲಕ್ನೋ: ಮದುವೆಯ ನಂತರ ಪತ್ನಿ ತೂಕ ಹೆಚ್ಚಾಗಿದ್ದಕ್ಕೆ ಮೀರತ್ ಮೂಲದ ವ್ಯಕ್ತಿಯೋರ್ವ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಇದೀಗ ಪತಿ ವಿರುದ್ಧ ಪತ್ನಿ ನ್ಯಾಯಾಕ್ಕಾಗಿ ಮೀರತ್‍ನ ಲಿಸಾಡಿ ಗೇಟ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ತನ್ನ ಪತಿ ಸಲ್ಮಾನ್ ತನ್ನನ್ನು ಒಂದು ತಿಂಗಳ ಹಿಂದೆ ಮನೆಯಿಂದ ಹೊರಹಾಕಿದ್ದಾರೆ ಮತ್ತು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಪೊಲೀಸರ ಮುಂದೆ ಮಹಿಳೆ ತನ್ನ ಅಳಲನ್ನು ತೊಡಿಕೊಂಡಿದ್ದಾರೆ. ಇದನ್ನೂ ಓದಿ: ಮುರುಘಾ ಶ್ರೀಗೆ ಸದ್ಯಕ್ಕಿಲ್ಲ ರಿಲೀಫ್ – ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
- Advertisement
7 ವರ್ಷದ ಮಗನನ್ನು ಹೊಂದಿರುವ ಈ ದಂಪತಿ ಆಗಾಗ ಜಗಳವಾಡುತ್ತಿದ್ದರು. ಅಲ್ಲದೇ ನಜ್ಮಾಳ ದೇಹದ ಬಗ್ಗೆ ಆಕೆಯ ಪತಿ ಅಸಹ್ಯಕರವಾಗಿ ಕಾಮೆಂಟ್ ಮಾಡುತ್ತಿದ್ದರು. ಅಲ್ಲದೇ ನನ್ನನ್ನು ಡುಮ್ಮಿ ಎಂದು ಕರೆಯುತ್ತಿದ್ದರು. ನಿನ್ನಂತೆ ಯಾರೂ ಇರಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು.
- Advertisement
ತಾನು ಸಲ್ಮಾನ್ ಜೊತೆ ಬಾಳಲು ಇಚ್ಛಿಸುತ್ತೇನೆ. ಆದರೆ ನನ್ನ ಪತಿ ವಿಚ್ಛೇದನ ಬೇಕು ಎಂದು ಕೇಳಿದ್ದಾರೆ. ಇದರಿಂದ ಈ ವಿಚಾರದಲ್ಲಿ ನಾನು ಅಸಹಾಯಕಳಾಗಿದ್ದೇನೆ. ನನಗೆ ನ್ಯಾಯ ಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮದುವೆಯಾಗುವಂತೆ ಕೋರಿ ಮಾರುಕಟ್ಟೆಯಲ್ಲಿ ಯುವಕನ ಹಿಂದೆ ಓಡಿದ ವಧು!