ಕೀವ್: ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿ ಹೋಗುತ್ತಿದೆ. ರಷ್ಯದ ಅಟ್ಟಹಾಸ 5ನೇ ದಿನವೂ ಮುಂದುವರಿದಿದೆ. ಉಕ್ರೇಮ್ ಅಧ್ಯಕ್ಷ ವ್ಲಾಡಿಮಿರ್ ಝೆಲನ್‍ಸ್ಕಿ ಅವರು ದೇಶ ರಕ್ಷಣೆಯಲ್ಲಿ ಪಾಲ್ಗೊಳ್ಳಿ ಎನ್ನುವ ಕರೆ ನೀಡಿದ ಹಿನ್ನೆಲೆಯಲ್ಲಿ ಮಿಸ್ ಉಕ್ರೇನ್ ದೇಶ ರಕ್ಷಣೆಗೆ ಗನ್ ಹಿಡಿದು ನಿಂತಿದ್ದಾರೆ.
ಮಿಸ್ ಉಕ್ರೇನ್ ಆಗಿರುವ ಅನಾಸ್ತೀನಾ ಲೀನಾ(Anastasiia Lenna)ಅವರು 2015ರಲ್ಲಿ ಮಿಸ್ ಗ್ರ್ಯಾಂಡ್ ಇನ್‍ಟರ್‌ನ್ಯಾಷನಲ್ (Miss Grand International) ಬ್ಯೂಟಿ ಸ್ಪರ್ಧೆಯಲ್ಲಿ ಗೆದ್ದಿದ್ದರು. ಇದೀಗ ದೇಶ ರಕ್ಷಣೆ ಮಾಡಲು ಉಕ್ರೇನ್ ಸೈನ್ಯವನ್ನು ಸೇರಿಕೊಂಡಿದ್ದಾರೆ. ಕೈಯಲ್ಲಿ ಗನ್ ಹಿಡಿದು, ಸಮವಸ್ತ್ರವನ್ನು ಧರಿಸಿ ನಿಂತಿರುವ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಲೀನಾ ಅವರು ಸ್ಲಾವಿಟಿಕ್ ಯೂನಿವರ್ಸಿಟಿ ಕೀವ್‌ನಲ್ಲಿ (Slavistik University in Kyiv) ವಿದ್ಯಾಭ್ಯಾಸವನ್ನು ಮಾಡಿದ್ದಾರೆ.
Advertisement
View this post on Instagram
Advertisement
ಅನಾಸ್ತೀನಾ ಲೀನಾ ಉಕ್ರೇನ್ ಸೇನೆ ಸೇರುತ್ತಿದ್ದಂತೆ ಉಕ್ರೇನ್ ಮೇಯರ್ ವಿಟಾಲಿ ಕ್ಲಿಟ್ಸ್ಚ್ಕೋ (Vitali Klitschko) ಕೂಡಾ ಸೇನೆಗೆ ಸೇರ್ಪಡೆಗೊಂಡಿದ್ದಾರೆ. ಹೆಚ್ಚಿನವರು ದೇಶ ಸೇವೆ ಮಾಡಲು ಸಿದ್ಧರಿದ್ದಾರೆ. ಆದರೆ ಹೆಚ್ಚಿನ ಶಸ್ತ್ರಾಸ್ತ್ರಗಳನ್ನು ಕೇಳುತ್ತಿದ್ದಾರೆ. ಹೆಚ್ಚಿನವರು ಮಿಲಿಟರಿ ಹಿನ್ನೆಲೆಯುಳ್ಳವರಾಗಿದ್ದಾರೆ. ಎಲ್ಲಾ ಮಹಿಳೆಯರು ಹಾಗೂ ಪುರುಷರು ದೇಶ ರಕ್ಷಣೆಗೆ ಗನ್ ಹಿಡಿದು ಸಿದ್ಧರಾಗಬೇಕು ಎಂದು ವಿಟಾಲಿ ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!
Advertisement
View this post on Instagram
Advertisement
ಉಕ್ರೇನ್ ಉಳಿವಿಗಾಗಿ ಮಹಿಳೆಯರು ಅಖಾಡಕ್ಕಿಳಿದಿದ್ದಾರೆ. ಉಕ್ರೇನ್ ಉಪಾಧ್ಯಕ್ಷ ಸ್ಟೀಫನ್ ಕುಬಿವ್ ಪತ್ನಿ ಸೇರಿದಂತೆ 36 ಸಾವಿರಕ್ಕೂ ಹೆಚ್ಚು ಮಹಿಳಾ ಯೋಧರು ಇದ್ದಾರೆ. ಇದನ್ನೂ ಓದಿ: ತಲೆಕೆಳಗಾದ ರಷ್ಯಾದ ಲೆಕ್ಕಾಚಾರ – ರಾಜಧಾನಿ ಕಿವ್ ಇನ್ನೂ ಕೈವಶವಾಗಿಲ್ಲ ಯಾಕೆ?