ಶಿವಮೊಗ್ಗ: ಬೇಸಿಗೆಯಲ್ಲಿ ಪ್ರತಿಬಾರಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ಅಂತಹ ಜಿಲ್ಲೆಯ ಹಳ್ಳಿಗಳಿಗೆ ನದಿಗಳಿಂದ ನೀರು ಪೂರೈಕೆ ಮಾಡುವ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾ ಪಂಚಾಯ್ತಿ ನಿರ್ಣಯ ಕೈಗೊಂಡಿತು.
ಜಿ.ಪಂ.ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿನ ವಿಷಯ ಚರ್ಚೆಗೆ ಬಂದು ಅಂತಿಮವಾಗಿ ಈ ನಿರ್ಣಯ ಕೈಗೊಳ್ಳಲಾಯಿತು. ಜಿಲ್ಲೆಯ ಕೆಲ ಭಾಗಗಳಲ್ಲಿ ಬೇಸಿಗೆಯಲ್ಲಿ ನಿರಂತರವಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದೆ. ಕೊಳವೆ ಬಾವಿಗಳ ಮೂಲಕ ನೀರಿನ ಬೇಡಿಕೆ ನೀಗಿಸಲು ಸಾಧ್ಯವಾಗುತ್ತಿಲ್ಲ. ನದಿಗಳ ಮೂಲಕ ನೀರು ಪೂರೈಸುವ ಬಹುಗ್ರಾಮ ಯೋಜನೆಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ.
Advertisement
Advertisement
ಎಲ್ಲೆಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಕ್ಕೆ ತರಬಹುದು ಎಂಬುದನ್ನು ಗುರುತಿಸಿ ವರದಿ ಸಲ್ಲಿಸುವಂತೆ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಉಪಾಧ್ಯಕ್ಷೆ ವೇದ ವಿಜಯಕುಮಾರ್, ಸಿಇಒ ವೈಶಾಲಿ ಹಾಜರಿದ್ದರು.