ಪತ್ನಿ ಜೊತೆ ಮೆಗಾಸ್ಟಾರ್ ಚಿರಂಜೀವಿ ಟೆಂಪಲ್ ರನ್

Public TV
1 Min Read
chiranjeevi

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಅವರು ಇಂದು (ಆ.22) 69ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಪತ್ನಿ ಸುರೇಖಾ (Wife Surekha) ಜೊತೆ ತಿರುಪತಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:Kantara Chapter 1: ಕಳರಿಪಯಟ್ಟು ಕಲಿಕೆಯ ಫೋಟೋ ಹಂಚಿಕೊಂಡ ರಿಷಬ್‌ ಶೆಟ್ಟಿ

chiranjeevi 2ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಚಿರಂಜೀವಿ ಅವರು ತಿರುಪತಿ ಸನ್ನಿಧಿಗೆ ಭೇಟಿ ಕೊಡುವ ಮೂಲಕ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ನಟನ ಹುಟ್ಟುಹಬ್ಬದ ಹಿನ್ನೆಲೆ ‘ವಿಶ್ವಾಂಭರ’ (Vishwambhara) ಸಿನಿಮಾದ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಮೆಗಾ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಟ್ಟಿದೆ ಚಿತ್ರತಂಡ.

chiranjeevi

ತ್ರಿಶೂಲ ಹಿಡಿದು ಸಖತ್ ಮಾಸ್ ಲುಕ್‌ನಲ್ಲಿ ಮೆಗಾಸ್ಟಾರ್ ಚಿರಂಜೀವಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್ ಲುಕ್ ನೋಡಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ. ಜೊತೆಗೆ ಸಿನಿಮಾ ಬಗೆಗಿನ ನಿರೀಕ್ಷೆ ಹೆಚ್ಚಾಗಿದೆ.

ಅಂದಹಾಗೆ, ‘ವಿಶ್ವಾಂಭರ’ ಸಿನಿಮಾದಲ್ಲಿ  ಚಿರಂಜೀವಿ ಜೊತೆ ತ್ರಿಷಾ, ಮೀನಾಕ್ಷಿ ಚೌಧರಿ, ಕನ್ನಡದ ನಟಿ ಆಶಿಕಾ ರಂಗನಾಥ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಮುಂದಿನ ವರ್ಷ ಜ.25ರಂದು ಸಿನಿಮಾ ಬಿಡುಗಡೆಯಾಗಲಿದೆ.

Share This Article