ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡ್‍ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ರೋಗಿಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
Advertisement
ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀರೋಗ ತುರ್ತು ಚಿಕಿತ್ಸಾ ಕೊಠಡಿ, ಐಸಿಯು ಮತ್ತು ಮಕ್ಕಳ ವಾರ್ಡ್‍ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮಕ್ಕಳ ವಾರ್ಡ್‍ನಲ್ಲಿದ್ದ ಬಾಣಂತಿಯರ ಮಕ್ಕಳನ್ನು ಕರೆದುಕೊಂಡು ಹೊರಗೆ ಓಡಿ ಬಂದಿದ್ದಾರೆ. ಇದನ್ನೂ ಓದಿ: ಮೈಸೂರಲ್ಲಿ ಶಿಕ್ಷಕರಿಗೆ ಜೀನ್ಸ್ ಪ್ಯಾಂಟ್ ಬ್ಯಾನ್
Advertisement
Advertisement
ಬೆಂಕಿ ಧಗಧಗನೆ ಹೊತ್ತಿ ಉರಿಯುತ್ತಿದ್ದಂತೆ ಆಸ್ಪತ್ರೆಯಲ್ಲಿದ್ದ ರೋಗಿಗಳು ಮತ್ತು ಸಂಬಂಧಿಕರು ಗಾಬರಿಗೊಂಡು ಹೊರಗೆ ಬಂದಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ, ವೈದ್ಯಾಧಿಕಾರಿಗಳು ಸ್ಥಳದಲ್ಲಿದ್ದು, ಘಟನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ
Advertisement