ಮಂಗಳೂರ್ ಬ್ಯೂಟಿ ಮೇಘಾ ಶೆಟ್ಟಿ (Megha Shetty) ಹೊಸ ಫೋಟೋಶೂಟ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಎಬ್ಬಿಸಿದ್ದಾರೆ. ಹೊಸ ಫೋಟೋಶೂಟ್‌ನಲ್ಲಿ ಸಖತ್ ಹಾಟ್ & ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.
ಬೂದು ಬಣ್ಣದ ಉಡುಗೆಯಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ಮಸ್ತ್ ಆಗಿ ಪೋಸ್ ನೀಡಿದ್ದಾರೆ. ಮೇಘಾ ಶೆಟ್ಟಿ ಹೊಸ ಅವತಾರ ನೋಡಿ ಅಭಿಮಾನಿಗಳು, ನಮಗೆ ಹಳೆಯ ಮೇಘಾ ಶೆಟ್ಟಿ ಬೇಕು ಎಂದು ಕಾಮೆಂಟ್ ಮಾಡಿದ್ರೆ, ಇನ್ನೂ ಕೆಲವರು ಯಾವ ಬಾಲಿವುಡ್ ನಟಿಗೂ ನೀವು ಕಮ್ಮಿಯಿಲ್ಲ ಎಂದು ಮೆಚ್ಚುಗೆ ಸೂಚಿಸಿದ್ದಾರೆ.
ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ (Vinay Rajkumar) ನಟನೆಯ ‘ಗ್ರಾಮಾಯಣ’ ಸಿನಿಮಾಗೆ ಮೇಘಾ ಶೆಟ್ಟಿ ನಾಯಕಿಯಾಗಿ ಸೆಲೆಕ್ಟ್ ಆಗಿದ್ದಾರೆ. ಅಕ್ಟೋಬರ್ ಮೊದಲ ವಾರದಿಂದ ಸಿನಿಮಾ ಶೂಟಿಂಗ್ ಶುರುವಾಗಲಿದೆ. ಇದನ್ನೂ ಓದಿ:ಪರಿಣಿತಿ ಚೋಪ್ರಾ – ರಾಘವ್ ಚಡ್ಡಾ ಅದ್ದೂರಿ ಮದುವೆ ಫೋಟೋಸ್
ಧನ್ವೀರ್ ಗೌಡ (Dhanveer Gowda) ಜೊತೆ ಕೈವ ಸಿನಿಮಾ, ಆಪರೇಷನ್ ಲಂಡನ್ ಕೆಫೆ ಸಿನಿಮಾಗಳನ್ನ ನಟಿ ಮುಗಿಸಿ ಕೊಟ್ಟಿದ್ದಾರೆ. ಈ ಸಿನಿಮಾಗಳಲ್ಲಿ ಹೀರೋಯಿನ್ ಆಗಿ ನಟಿಸಿದ್ದಾರೆ.
ಜೊತೆ ಜೊತೆಯಲಿ (Jothe Jotheyali) ಸೀರಿಯಲ್ ಮೂಲಕ ಫೇಮಸ್ ಆಗಿರುವ ನಟಿ ಈಗಾಗಲೇ ತ್ರಿಬಲ್ ರೈಡಿಂಗ್, ದಿಲ್ ಪಸಂದ್ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]