ಕಲಬುರಗಿ: ಜಿಲ್ಲೆಯ ಚಿತ್ತಾಪುರ (Chittapura) ತಾಲೂಕಿನ ನಾಲವಾರ ಗ್ರಾಮದಲ್ಲಿರುವ ಶ್ರೀ ಸದ್ಗುರು ಕೋರಿಸಿದ್ದೇಶ್ವರ ಮಠಕ್ಕೆ ಮೇಘಾಲಯ (Meghalaya) ರಾಜ್ಯಪಾಲ ಸಿ.ಹೆಚ್ ವಿಜಯಶಂಕರ್ (C H Vijayashankar) ಅವರು ಶುಕ್ರವಾರ ಭೇಟಿ ನೀಡಿದರು.
ತೋಟೆಂದ್ರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಮತ್ತು ಶ್ರೀ ಸಿದ್ಧತೋಟೆಂದ್ರ ಶಿವಾಚಾರ್ಯರ ಜನ್ಮದಿನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಠದ ಆವರಣದಲ್ಲಿ ನಿರ್ಮಾಣವಾಗಿರುವ ಸುವರ್ಣ ಭವನದ ಉದ್ಘಾಟನೆಯನ್ನು ನೆರವೇರಿಸಿದರು. ಇದನ್ನೂ ಓದಿ: ಶಿವಮೊಗ್ಗ ದಸರಾ | ಬೆಳ್ಳಿ ಅಂಬಾರಿ ಜಂಬೂಸವಾರಿಗೆ ಸಕಲ ಸಿದ್ಧತೆ
ಈ ಸಂದರ್ಭದಲ್ಲಿ ಮಠದ ವತಿಯಿಂದ ರಾಜ್ಯಪಾಲರಿಗೆ ಗೌರವ ಸತ್ಕಾರ ಮಾಡಲಾಯಿತು. ಮೇಘಾಲಯ ರಾಜ್ಯಪಾಲರಿಗೆ ಸ್ಥಳೀಯ ಬಿಜೆಪಿ ನಾಯಕರು ಸಾಥ್ ನೀಡಿದರು. ನಾಲವಾರ್ ಶ್ರೀಗಳು, ಶ್ರೀಶೈಲಂ ಸಾರಂಗಮಠದ ಪೀಠಾಧಿಪತಿ ಡಾ, ಸಾರಂಗದೇಶಿಕೆಂದ್ರ ಮಹಾಸ್ವಾಮಿಗಳು, ಮಾಜಿ ಸಂಸದ ಡಾ. ಬಸವರಾಜ್ ಪಾಟೀಲ್ ಸೇಡಂ, ಶಾಸಕರಾದ ಬಿ.ಜಿ. ಪಾಟೀಲ್, ಬಸವರಾಜ್ ಮತ್ತಿಮೂಡ್ ಮುಂತಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: Bagmati Express Train Accident | ಸಾವಿರಕ್ಕೂ ಅಧಿಕ ಪ್ರಯಾಣಿಕರಿಗೆ ರೈಲ್ವೇಯಿಂದ ಕರೆ
ಈ ಜುಲೈನಲ್ಲಿ ಮೈಸೂರು ಮೂಲದ ವಿಜಯಶಂಕರ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇಘಾಲಯ ರಾಜ್ಯಪಾಲರಾಗಿ ನೇಮಿಸಿದ್ದರು. ಇದನ್ನೂ ಓದಿ: ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಇಬ್ಬರು ಆರೋಪಿಗಳಿಗೆ ಗುಂಡೇಟು