ನವದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ರೈತರು ಮೃತಪಟ್ಟಿರುವ ಬಗ್ಗೆ ಪ್ರಧಾನಿ ಮೋದಿ ಅವರು ಹಗುರವಾಗಿ ಮಾತನಾಡಿದ್ದಾರೆ ಎಂದು ಮೇಘಾಲಯ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿ ಗಡಿಭಾಗಗಳಲ್ಲಿ 1 ವರ್ಷ ನಡೆದ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ ರೈತರ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದೆ. ಪ್ರತಿಭಟನೆಯಲ್ಲಿ 500 ರೈತರು ಮೃತಪಟ್ಟಿದ್ದಾರೆ ಎಂದು ಮೋದಿ ಅವರಿಗೆ ತಿಳಿಸಿದೆ. ʼಅವರು ನನಗಾಗಿ ಸತ್ತರೇʼ ಎಂದು ಪ್ರಧಾನಿ ಮೋದಿ ಅವರು ರೈತರ ಬಗ್ಗೆ ಸೊಕ್ಕಿನಿಂದ ಮಾತನಾಡಿದ್ದಾರೆ ಎಂದು ಮೇಘಾಲಯ ರಾಜ್ಯಪಾಲ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸೋಂಕು ವೇಗವಾಗಿ ಹರಡುತ್ತಿದೆ, ನಾಳೆ ಸಂಜೆ ತಜ್ಞರ ಜೊತೆ ಸಭೆ ಮಾಡುತ್ತೇವೆ: ಬೊಮ್ಮಾಯಿ
Advertisement
Advertisement
ಹೌದು, ರೈತರು ಪ್ರತಿಭಟನೆ ಸಂದರ್ಭದಲ್ಲಿ ನಿಮ್ಮದೇ ಸರ್ಕಾರ ಆಡಳಿತದಲ್ಲಿದೆ ಎಂದು ನಾನು ಪ್ರಧಾನಿ ಮೋದಿ ಅವರಿಗೆ ಪ್ರತ್ಯುತ್ತರ ನೀಡಿದೆ. ಈ ವೇಳೆ ಅಮಿತ್ ಶಾ ಅವರನ್ನು ಭೇಟಿಯಾಗುವಂತೆ ಮೋದಿ ಅವರು ನನಗೆ ತಿಳಿಸಿದರು. ಅದರಂತೆ ಅವರನ್ನೂ ಭೇಟಿಯಾಗಿದ್ದೇನೆ. ಪ್ರಧಾನಿ ಮೋದಿ ಒಬ್ಬ ಸೊಕ್ಕಿನ ಮನುಷ್ಯ ಎಂದು ಕಿಡಿಕಾರಿದ್ದಾರೆ.
Advertisement
ನಾಯಿಗಳು ಸತ್ತರೆ, ಪ್ರಧಾನಿಗಳು ಸಂತಾಪ ಸೂಚಿಸುತ್ತಾರೆ ಎಂದು ಮೋದಿ ವಿರುದ್ಧ ಮೇಘಾಲಯ ರಾಜ್ಯಪಾಲ ವ್ಯಂಗ್ಯವಾಡಿದರು. ಇದನ್ನೂ ಓದಿ: ಮಿನಿಸ್ಟರ್‌ಗಳು ಏನೇನೋ ಮಾತಾಡ್ತಿದ್ದಾರೆ, ಅವರಿಗೆ ಒಳ್ಳೆಯದಾಗ್ಲಿ ರಾಜ್ಯಕ್ಕೂ ಹಿತವಾಗ್ಲಿ: ಡಿಕೆಶಿ
Advertisement
ಮೋದಿ ಒಬ್ಬ ದುರಹಂಕಾರಿ
ಪ್ರಧಾನಿ ನರೇಂದ್ರ ಮೋದಿ ಒಬ್ಬ ದುರಹಂಕಾರಿ. ರೈತರ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಎಂದು ಮಲಿಕ್ ಗರಂ ಆಗಿದ್ದಾರೆ. ಹರಿಯಾಣದ ದಾದ್ರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ಮೋದಿ ಅವರ ಭೇಟಿ ಕುರಿತು ಹೀಗೆ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿ ಭಾಗಗಳಲ್ಲಿ ರೈತರು ಸುಮಾರು 1 ವರ್ಷ ಪ್ರತಿಭಟನೆ ನಡೆಸಿದರು. ರೈತರ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ನಂತರ ಕಾಯ್ದೆಗಳನ್ನು ವಾಪಸ್ ಪಡೆಯಿತು. ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ನೀಡಬೇಕು, ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ರೈತರು ಹಲವು ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟಿದ್ದಾರೆ. ರೈತರ ವಿರುದ್ಧದ ಕೇಸ್‌ಗಳನ್ನು ವಾಪಸ್ ಪಡೆದುಕೊಳ್ಳುವ ಭರವಸೆ ನೀಡಿರುವ ಕೇಂದ್ರ ಸರ್ಕಾರ, ಮೃತ ರೈತರ ಕುಟುಂಬದವರಿಗೆ ಪರಿಹಾರ ನೀಡುವ ಬಗ್ಗೆ ಯಾವುದೇ ಭರವಸೆ ನೀಡಿಲ್ಲ.