ಶಿಲ್ಲಾಂಗ್: ವ್ಯಕ್ತಿಯೊಬ್ಬ ಚರ್ಚ್‌ನೊಳಗೆ (Church) ಪ್ರವೇಶಿಸಿ ಜೈ ಶ್ರೀರಾಂ ಘೋಷಣೆ ಕೂಗಿದ ಘಟನೆ ಮೇಘಾಲಯದ (Meghalaya) ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆಕಾಶ್ ಸಾಗರ್ ಎಂಬಾತ ಮಾವಿನ್ನಾಂಗ್ ಗ್ರಾಮದ ಚರ್ಚ್ ಒಳಗೆ ಅಕ್ರಮವಾಗಿ ಪ್ರವೇಶಿಸಿದ್ದಾನೆ. ಬಳಿಕ ಜೈ ಶ್ರೀರಾಂ ಘೋಷಣೆ ಕೂಗಿ ಅದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಈ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೊಪದಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Advertisement
Advertisement
ಮೇಘಾಲಯ ಸಿಎಂ ಕಾನಾಡ್ ಸಂಗ್ರಾ ಅವರು ಈ ಘಟನೆಯನ್ನು ಖಂಡಿಸಿದ್ದಾರೆ. ಇದು ಉದ್ದೇಶಪೂರ್ವಕ ಕೃತ್ಯವಾಗಿದೆ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರವು ಸಾಮಾಜಿಕ, ಧಾರ್ಮಿಕ ಅಥವಾ ಕೋಮು ಸಾಮರಸ್ಯ ಕದಡುವುದಕ್ಕೆ ಅವಕಾಶ ಮಾಡಿ ಕೊಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
Advertisement
Advertisement
ಕರ್ನಾಟಕದಲ್ಲೂ ಇದೇ ಮಾದರಿಯ ಘಟನೆ
2023ರಲ್ಲಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಇಬ್ಬರು ವ್ಯಕ್ತಿಗಳು ಮಸೀದಿಯೊಳಗೆ ತೆರಳಿ ಜೈ ಶ್ರೀರಾಂ ಘೋಷಣೆ ಕೂಗಿದ್ದರು. ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ.