ಬೆಂಗಳೂರು: ರ‍್ಯಾಗಿಂಗ್ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ಮೇಘನಾಳ ಕಣ್ಣನ್ನು ಪೋಷಕರು ದಾನ ಮಾಡಿದ್ದಾರೆ.
ಕುಮಾರಸ್ವಾಮಿ ಲೇಔಟ್‍ನ ದಯಾನಂದಸಾಗರ ಕಾಲೇಜಿನಲ್ಲಿ 2ನೇ ಸೆಮಿಸ್ಟರ್ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದ ಮೇಘನಾ(18) ರಾಜರಾಜೇಶ್ವರಿ ನಗರದ ಚನ್ನಸಂದ್ರದ ಶಬರಿ ಅಪಾರ್ಟ್ ಮೆಂಟ್ ನಲ್ಲಿ ಇಂದು ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಳು.
ಮೇಘನಾ ತಂದೆ ಚಂದ್ರಶೇಖರ್ ಅಂಧರಾಗಿದ್ದು, ಅವರ ಪತ್ನಿ ಲತಾ ಪತಿಯನ್ನ ಕೆಲಸಕ್ಕೆ ಬಿಡಲು ಹೋಗಿದ್ದ ವೇಳೆ ಮೇಘನಾ ಆತ್ಮಹತ್ಯೆಗೆ ಶರಣಾಗಿದ್ದಳು. ಈ ವೇಳೆ ಮೇಘನಾ ಪೋಷಕರು ಮೇಘನಾ ಕಣ್ಣನ್ನು ದಾನ ಮಾಡಿ, ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಆರ್‍ಆರ್ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮೇಘನಾ ಕ್ಲಾಸ್ ರೆಪ್ರೆಸೆಂಟೇಟಿವ್ ಎಲೆಕ್ಷನ್‍ನಲ್ಲಿ ಸೋತಿದ್ದ ಹಿನ್ನೆಲೆ ತರಗತಿಯಲ್ಲಿ ಬೇರೆ ವಿದ್ಯಾರ್ಥಿಗಳು ರ‍್ಯಾಗ್ ಮಾಡುತ್ತಿದ್ದರು. ನೀನು ಬ್ಯಾಡ್ ಗರ್ಲ್ ಎಂದು ಪದೇ-ಪದೇ ಹೇಳುತ್ತಿದ್ದರಂತೆ. ಅದಕ್ಕೆ ಮನನೊಂದ ಮೇಘನಾ ರಾಜರಾಜೇಶ್ವರಿ ನಗರದ ಚನ್ನಸಂದ್ರದ ಶಬರಿ ಅಪಾರ್ಟ್ ಮೆಂಟ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ರೇಗಿಸುತ್ತಿದ್ದ ವಿದ್ಯಾರ್ಥಿಗಳಿಗೆ ಹೆಚ್‍ಒಡಿ ರಾಜಕುಮಾರ ಬೆಂಬಲ ನೀಡುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ.