ರಾಯನ್ ರಾಜ್ ಸರ್ಜಾ ಕ್ರಿಸ್‍ಮಸ್ ಸಂಭ್ರಮ ಹೇಗಿತ್ತು ಗೊತ್ತಾ?

Public TV
1 Min Read
meghana raj 1

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮೇಘನಾ ರಾಜ್ ಕ್ರಿಸ್‍ಮಸ್ ಹಬ್ಬಕ್ಕೆ ಭರ್ಜರಿಯಾಗಿ ತಯಾರಿ ನಡೆಸಿರುವ ಕುರಿತಾಗಿ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು. ಇದೀಗ ರಾಯನ್ ಮೊದಲ ಬಾರಿಗೆ ಸೆಲೆಬ್ರೇಟ್ ಮಾಡಿರುವ ಕ್ರಿಸ್‍ಮಸ್ ಹೇಗೆ ಇತ್ತು ಎನ್ನುವ ಫೋಟೋವನ್ನು ಶೇರ್ ಮಾಡಿದ್ದಾರೆ.

Meghana Raj 1

ಕ್ರಿಸ್‍ಮಸ್ ಹಬ್ಬದ ಶುಭಾಶಯಗಳು, ನಿಮ್ಮ ಜೀವನದುದ್ದಕ್ಕೂ ಬೆಳಕು, ಪ್ರೀತಿ ಸದಾ ಇರಲಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಮಗನ ಜೊತೆಗೆ ಕ್ರಿಸ್‍ಮಸ್ ಟ್ರೀ ಪಕ್ಕದಲ್ಲಿ ಕುಳಿತುಕೊಂಡು ನಗುತ್ತಾ ಪೋಸ್ ಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಈ ಫೋಟೋವನ್ನು ಮೆಚ್ಚಿ ರಾಯನ್ ಸೆಲೆಬ್ರೇಟ್ ಮಾಡುತ್ತಿರುವ ಮೊದಲ ಕ್ರಿಸ್‍ಮಸ್‍ಗೆ ಶುಭ ಕೋರುತ್ತಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ನಳಿನ್ ಕುಮಾರ್ ಕಟೀಲ್

meghana raj 1 1

ಮೇಘನಾ ರಾಜ್ ಅವರ ತಂದೆ ಸುಂದರ್ ರಾಜ್ ಹಿಂದೂ ಆಗಿದ್ದು, ಅವರ ತಾಯಿ ಪ್ರಮೀಳಾ ಜೋಷಾಯಿ ಕ್ರಿಶ್ಚಿಯನ್ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ ಮೇಘನಾ ಮನೆಯಲ್ಲಿ ಯಾವುದೇ ಹಿಂದೂ ಹಾಗೂ ಕ್ರಿಶ್ಚಿಯನ್ ಹಬ್ಬಗಳು ಬಂದಾಗ ಎರಡು ಹಬ್ಬವನ್ನೂ ಸಮನವಾಗಿ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ.

meghana raj

ನಟ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಹಿಂದೂ ಹಾಗೂ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಿದ್ದರು. ಇದಕ್ಕೆ ಮತ್ತೊಂದು ಸಾಕ್ಷಿ ಎಂಬಂತೆ ಈ ದಂಪತಿಯ ಪ್ರೀತಿಯ ಪುತ್ರನಿಗೆ ರಾಯನ್ ರಾಜ್ ಸರ್ಜಾ ಎಂದು ಹಿಂದೂ ಸಂಪ್ರದಾಯದ ಜೊತೆಗೆ ಕ್ರೈಸ್ತ ಸಂಪ್ರದಾಯದ ಪ್ರಕಾರ ನಾಮಕರಣ ಮಾಡಲಾಗಿತ್ತು.

meghana raj

ರಾಯನ್ ಎಂಬ ಹೆಸರು ಎಲ್ಲ ಧರ್ಮಕ್ಕೂ ಸೇರಿದೆ. ಬೇರೆ ಬೇರೆ ವರ್ಷನ್, ಬೇರೆ ಬೇರೆ ರೀತಿಯಲ್ಲಿ ಉಚ್ಛಾರಣೆ ಇರಬಹುದು, ಆದರೆ ಅರ್ಥ ಒಂದೇ. ರಾಯನ್ ಸರ್ಜಾ ಎಂದರೆ ಯುವರಾಜ ಎಂಬ ಅರ್ಥವಿದೆ ಎಂದು ಮೇಘನಾ ಸ್ಪಷ್ಟಪಡಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *