ಬೆಂಗಳೂರು: ಕ್ರಿಸ್‍ಮಸ್ ಹಬ್ಬಕ್ಕೆ ಈ ಬಾರಿ ಸ್ಯಾಂಡಲ್‍ವುಡ್ ನಟಿ ಮೇಘನಾ ರಾಜ್ ಮನೆಯಲ್ಲಿ ಭರ್ಜರಿ ತಯಾರಿ ನಡೆಸಲಾಗುತ್ತಿದ್ದು ಸಿಂಗಾರಗೊಂಡಿರುವ ಮನೆಯಲ್ಲಿ ಮೇಘನಾ ಪ್ರೀತಿಯ ಮಗನೊಂದಿಗೆ ಫೋಟೋವೊಂದನ್ನು ಕ್ಲಿಕ್ಕಿಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
Advertisement
ಮೇಘನಾ ರಾಜ್ ಅವರ ತಂದೆ ಸುಂದರ್ ರಾಜ್ ಹಿಂದೂ ಆಗಿದ್ದು, ಅವರ ತಾಯಿ ಪ್ರಮೀಳಾ ಜೋಷಾಯಿ ಕ್ರಿಶ್ಚಿಯನ್ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ ಮೇಘನಾ ಮನೆಯಲ್ಲಿ ಯಾವುದೇ ಹಿಂದೂ ಹಾಗೂ ಕ್ರಿಶ್ಚಿಯನ್ ಹಬ್ಬಗಳು ಬಂದಾಗ ಎರಡು ಹಬ್ಬವನ್ನು ಸಮನಾಗಿ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಇದನ್ನೂ ಓದಿ: ಮಗನ ಹುಟ್ಟುಹಬ್ಬಕ್ಕೆ ವಿಭಿನ್ನವಾಗಿ ಕರೀನಾ ವಿಶ್
Advertisement
Advertisement
ಸದ್ಯ ಕ್ರಿಸ್‍ಮಸ್ ಹಬ್ಬಕ್ಕೆ ಇನ್ನೇನು ನಾಲ್ಕು ದಿನಗಳಷ್ಟೇ ಬಾಕಿ ಇದ್ದು, ಈ ಬಾರಿ ಹಬ್ಬಕ್ಕೆ ಮೇಘನಾ ರಾಜ್ ಮನೆಯನ್ನು ಸಖತ್ ಕಲರ್ ಫುಲ್ ಆಗಿ ಸಿಂಗರಿಸಲಾಗಿದೆ. ಇನ್ನೂ ಈ ಫೋಟೋವನ್ನು ಮೇಘನಾ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋದಲ್ಲಿ ಲೈಟ್ ಹಾಗೂ ಸ್ಟಾರ್ಸ್‍ಗಳಿಂದ ಅಲಂಕಾರಗೊಳಿಸಲಾಗಿರುವ ಮನೆಯ ಮಧ್ಯ ಭಾಗದಲ್ಲಿ ಮೇಘನಾ ರಾಯನ್‍ನ್ನು ಎತ್ತಿಕೊಂಡಿದ್ದಾರೆ. ಫೋಟೋದಲ್ಲಿ ರಾಯನ್ ಮಂಕಿ ಕ್ಯಾಪ್ ಧರಿಸಿ ಕಲರ್ ಫುಲ್ ಆಗಿರುವ ಲೈಟಿಂಗ್ಸ್‍ನನ್ನೇ ಅಚ್ಚರಿಯಿಂದ ನೋಡುತ್ತಿರುವುದನ್ನು ಕಾಣಬಹುದಾಗಿದೆ. ಈ ಫೋಟೋ ಜೊತೆಗೆ ಲವ್, ಲೈಫ್ ಮತ್ತು ಅದ್ಭುತವಾದ ಕ್ರಿಸ್‍ಮಸ್ ತಿಂಗಳು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.
Advertisement
View this post on Instagram
ಈ ಮುನ್ನ ದಿವಂಗತ ನಟ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಹಿಂದೂ ಹಾಗೂ ಕ್ರಿಶ್ಚಿಯನ್ ಎರಡು ಸಂಪ್ರದಾಯದಂತೆ ಮದುವೆಯಾಗಿದ್ದರು. ಇದಕ್ಕೆ ಮತ್ತೊಂದು ಸಾಕ್ಷಿ ಎಂಬಂತೆ ಈ ದಂಪತಿಯ ಪ್ರೀತಿಯ ಪುತ್ರನಿಗೆ ರಾಯನ್ ರಾಜ್ ಸರ್ಜಾ ಎಂದು ಹಿಂದೂ ಸಂಪ್ರದಾಯದ ಜೊತೆಗೆ ಕ್ರೈಸ್ತ ಸಂಪ್ರದಾಯದ ಪ್ರಕಾರ ನಾಮಕರಣ ಮಾಡಲಾಗಿತ್ತು. ಅಲ್ಲದೇ ರಾಯನ್ ಎಂಬ ಹೆಸರು ಎಲ್ಲ ಧರ್ಮಕ್ಕೂ ಸೇರಿದೆ. ಬೇರೆ ಬೇರೆ ವರ್ಷನ್, ಬೇರೆ ಬೇರೆ ರೀತಿಯಲ್ಲಿ ಉಚ್ಛಾರಣೆ ಇರಬಹುದು, ಆದರೆ ಅರ್ಥ ಒಂದೇ. ರಾಯನ್ ಸರ್ಜಾ ಎಂದರೆ ಯುವರಾಜ ಎಂಬ ಅರ್ಥವಿದೆ ಎಂದು ಮೇಘನಾ ಸ್ಪಷ್ಟಪಡಿಸಿದ್ದರು. ಇದನ್ನೂ ಓದಿ: ನಿನ್ನ ಕಂಡ ಕ್ಷಣದಿಂದ ಯಾಕೋ ನಾನು ನನ್ನಲಿಲ್ಲ ಅಂತೀರೋ ರಮ್ಯಾ